ನವದೆಹಲಿ: ಭಾರತದ ಸಾಮರ್ಥ್ಯದಿಂದಾಗಿ ವಿಶ್ವವು ಕೊರೋನಾವನ್ನು ಸಮರ್ಥವಾಗಿ ಎದುರಿಸಿದೆ. ಹಾಗೆಯೇ ಭಾರತದ ಔಷಧ ಉತ್ಪಾದನಾ ಸಾಮರ್ಥ್ಯವನ್ನು ವಿಶ್ವದ ಇತರ ದೇಶಗಳ ಜೊತೆಗೆ ಹಂಚಿಕೊಳ್ಳುವಲ್ಲಿಯೂ ಪ್ರಧಾನಿ ಮೋದಿ ಅವರ ನಾಯಕತ್ವ ನಿರ್ಣಾಯಕವಾಗಿತ್ತು ಎಂದು ಕೆನಡದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಅವರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಪ್ರಧಾನಮಂತ್ರಿ ಸಚಿವಾಲಯ ತಿಳಿಸಿದೆ.
ಭಾರತ ಕೊರೋನಾ ಸಂದರ್ಭ ಕಾರ್ಯನಿರ್ವಹಿಸಿದ ರೀತಿಯನ್ನು ಹಾಡಿ ಹೊಗಳಿದ ಜಸ್ಟಿನ್ ಟ್ರುಡೋ, ಕೆನಡ ದೇಶಕ್ಕೆ ಅಗತ್ಯವಿರುವ ಕೋವಿಡ್ ಲಸಿಕೆಗಳನ್ನು ಒದಗಿಸಿ ಕೊಡುವಂತೆ ಮನವಿ ಮಾಡಿದ್ದಾರೆ. ಭಾರತವು ತನ್ನ ರಾಜತಾಂತ್ರಿಕ ಅಡಿಯಲ್ಲಿ 20 ದೇಶಗಳಿಗೆ ಈಗಾಗಲೇ ಕೋವಿಡ್ ಲಸಿಕೆಗಳನ್ನು ಉಡುಗೊರೆಯಾಗಿ ನೀಡಿದೆ.
ಈ ಸಂದರ್ಭದಲ್ಲಿ ಈಗಾಗಲೇ ಇತರ ಹಲವು ದೇಶಗಳಿಗೆ ಕೊರೋನಾ ಲಸಿಕೆ ನೀಡಿದೆ. ಹಾಗೆಯೇ ಕೆನಡಾದ ಮನವಿಯನ್ನು ಸಹ ಪುರಸ್ಕರಿಸಲು ಭಾರತ ಪ್ರಯತ್ನ ಮಾಡಲಿದೆ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಟ್ರುಡೋ ಅವರಿಗೆ ಭರವಸೆ ನೀಡಿದ್ದಾರೆ ಎಂಬುದಾಗಿಯೂ ಪ್ರಧಾನಿಗಳ ಕಾರ್ಯಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.