ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಗುಜರಾತ್ ಮತ್ತು ಛತ್ತೀಸ್ಗಡ ರಾಜ್ಯಗಳಲ್ಲಿ ಅನುಸರಿಸಿರುವ ಮಾದರಿಗಳನ್ನು ಅನುಸರಿಸಿ ವಿವಿ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜನರು ಸಾವಯವ ಆಹಾರದತ್ತ ಒಲವು ತೋರುತ್ತಿದ್ದಾರೆ. ಇದರಿಂದ ಸಾವಯವ ವಸ್ತುಗಳಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಯವ ಕೃಷಿಗೆ ಹೆಚ್ಚು ಪ್ರಾಧಾನ್ಯತೆ ನೀಡುವ ದೃಷ್ಟಿಯಿಂದ ಶಿವಮೊಗ್ಗದಲ್ಲಿಯೂ ಇಂತಹ ಒಂದು ವಿಶ್ವವಿದ್ಯಾಲಯವನ್ನು ತೆರೆಯುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಭೂಮಿಗೆ ರಾಸಾಯನಿಕ ಗೊಬ್ಬರ ಸುರಿಯುವುದರಿಂದ ಭೂಮಿ ಮತ್ತು ತಿನ್ನುವ ಆಹಾರ ಎರಡರ ಮೇಲೂ ದುಷ್ಪರಿಣಾಮವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾವಯವ ಕೃಷಿಯತ್ತ ಹೆಚ್ಚಿನ ಒಲವು ತೋರಿಸಬೇಕಾಗಿದೆ. ರೈತರಿಗೊಂದು ಕಾರ್ಯಕ್ರಮದಲ್ಲಿಯೂ ಸಾವಯವ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗಮನ ಹರಿಸಬೇಕಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.