ಬೆಂಗಳೂರು: ರಾಜ್ಯ ಸರ್ಕಾರದ ʼಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆʼ ಯೋಜನೆಯಡಿ ದಿವ್ಯಾಂಗರನ್ನೂ ಸೇರ್ಪಡೆ ಮಾಡಿ, ಅವರಿಗೆ ದೊರೆಯಬೇಕಾದ ಅನುಕೂಲತೆ, ಅಗತ್ಯತೆಗಳನ್ನು ಅವರಿರುವ ಸ್ಥಳದಲ್ಲಿಯೇ ಒದಗಿಸುವ ಕೆಲಸವನ್ನು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ದಿವ್ಯಾಂಗರಿಗೆ ಅಗತ್ಯವಾದ ಸೌಲಭ್ಯಗಳನ್ನು, ದ್ವಿಚಕ್ರ ವಾಹನಗಳನ್ನು ಅವರಿಗೆ ಸುಲಭವಾಗಿ ದೊರೆಯುವುದಕ್ಕೆ ಪೂರಕ ಅನುಕೂಲಗಳನ್ನು ಮಾಡಲಾಗುವುದು. ರಾಜ್ಯದಲ್ಲಿ ತುಳಿತಕ್ಕೆ ಒಳಗಾದವರು, ವೃದ್ಧರು, ದಿವ್ಯಾಂಗರನ್ನು, ಸೌಲಭ್ಯ ವಂಚಿತ ಜನರನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಯೋಜನೆಯನ್ನು ಅನುಷ್ಠಾನ ಮಾಡಲಾಗಿರುವುದಾಗಿಯೂ ಅವರು ಹೇಳಿದ್ದಾರೆ.
ಸಮಾಜದ ಬಡ ಜನರಿಗೆ ನೆರವಾಗುವುದಕ್ಕೆ ಸಂಬಂಧಿಸಿದಂತೆ, ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜಿಲ್ಲಾಧಿಕಾರಿಯವರನ್ನು ಒಳಗೊಂಡಂತೆ ಇತರ ಅಧಿಕಾರಿಗಳು ತಿಂಗಳ ವಾರದಲ್ಲಿ ಒಂದು ದಿನ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಜೊತೆಗೆ ಅಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಲಿದ್ದಾರೆ. ಜೊತೆಗೆ ಸಮಸ್ಯೆಗಳ ಪರಿಹಾರಕ್ಕೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.