ಮೈಸೂರು: ಬಹುನಿರೀಕ್ಷಿತ ಮೈಸೂರು – ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ, ಎಲೆಕ್ಟ್ರಿಫಿಕೇಶನ್ ಕಾಮಗಾರಿಗೆ ಈಗಾಗಲೇ ಗುತ್ತಿಗೆಯನ್ನು ನೀಡಲಾಗಿದೆ. ಈ ಕಾಮಗಾರಿ 1 ವರ್ಷದೊಳಗಾಗಿ ಪೂರ್ಣಗೊಳ್ಳಲಿದೆ. ಫೆ. 1 ರಂದು ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಗೆ ಅನುದಾನ ದೊರೆತಿರುವುದಾಗಿ ತಿಳಿಸಿದ್ದಾರೆ.
ಸುಮಾರು 71 ಕಿಮೀ ಉದ್ದದ ವಿದ್ಯುದೀಕರಣ ಯೋಜನೆ ಇದಾಗಿದೆ. ಇದಕ್ಕಾಗಿ 18.89 ಕೋಟಿ ರೂ. ಗಳ ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಮಾರ್ಗದಲ್ಲಿ ವಿದ್ಯಾರ್ಥಿಗಳು ಮತ್ತು ನೌಕರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಿದ್ದು, ರೈಲುಗಳ ವೇಗ ಹೆಚ್ಚಾಗುವುದು ಮತ್ತು ಎಂಇಎಂಯು ಸೇವೆಗಳನ್ನು ಒದಗಿಸುವುದಕ್ಕೂ ಪೂರಕವಾಗಿರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.