ನವದೆಹಲಿ: ಕಳೆದ 5 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಒಂದು ಕೋಟಿಗೂ ಅಧಿಕ ಎಂಎಸ್ಎಂಇಗಳು ನೋಂದಣಿಯಾಗಿವೆ ಎಂದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ಮಾಹಿತಿ ನೀಡಿದೆ.
ಐದು ವರ್ಷಗಳಲ್ಲಿ ದೇಶದಲ್ಲಿ 1 ಕೋಟಿ 2 ಲಕ್ಷ 32 ಸಾವಿರ ಎಂಎಸ್ಎಂಇಗಳನ್ನು ನೋಂದಾಯಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತಿನ್ ಗಡ್ಕರಿ ಅವರು, ಉದ್ಯೋಗ್ ಆಧಾರ್ ಪೋರ್ಟಲ್ ಪ್ರಕಾರ 2015 ರಿಂದ ಹಿಡಿದು ಜೂನ್ 2020 ರವರೆಗೆ ಒಟ್ಟು 1 ಕೋಟಿ 2 ಲಕ್ಷ 32 ಸಾವಿರದ 468 ಎಂಎಸ್ಎಂಇಗಳನ್ನು ನೋಂದಾಯಿಸಲಾಗಿದೆ ಎಂದಿದ್ದಾರೆ.
ಎಂಎಸ್ಎಂಇ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಎಂಎಸ್ಎಂಇ ಸಚಿವಾಲಯವು ಹಲವಾರು ಇತರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಎಂಎಸ್ಎಂಇ ವಲಯವನ್ನು ಬಲಪಡಿಸಲು ವಿಶೇಷವಾಗಿ ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಸರ್ಕಾರ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.