ಬೆಂಗಳೂರು: ಇದೇ ತಿಂಗಳ 17 ಅಥವಾ 18 ರಿಂದ ರಾಜ್ಯದಲ್ಲಿ 6 – 8 ನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದಕ್ಕೆ ಅಗತ್ಯವಾದ ಅನುಕೂಲತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
1 – 5 ನೇ ತರಗತಿ ವರೆಗೆ ವಿದ್ಯಾಗಮವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದ್ದು, 6- 8 ನೇ ತರಗತಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ನಡೆಸಲು ತೀರ್ಮಾನಿಸಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಪ್ರಸ್ತುತ ಶೈಕ್ಷಣಿಕ ವರ್ಷದ ಎಲ್ಲಾ ತರಗತಿಗಳನ್ನು ಆರಂಭ ಮಾಡುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಸಹ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ.
ಈ ಸಂಬಂಧ ಫೆ. 16 ರಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೋವಿಡ್ ತಜ್ಞರ ಜೊತೆಗೂ ಚರ್ಚೆ ನಡೆಸಲಾಗುವುದು. ಕೊರೋನಾ ನಿಯಂತ್ರಣ ಸಂಬಂಧಿ ನಿಯಮಗಳನ್ನು ಅನುಸರಿಸಿಕೊಂಡೇ ಶಾಲಾರಂಭ ಮಾಡುವುದಾಗಿ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಪೋಷಕರ ಒಪ್ಪಿಗೆ ಪತ್ರ ತಂದು ಶಾಲೆಗೆ ಹಾಜರಾಗಬಹುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.