ನವದೆಹಲಿ: ಶಾಹೀನ್ ಭಾಗ್ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗಳನ್ನು ‘ಕಾನೂನುಬಾಹಿರ’ ಎಂದು ಹೇಳಿದ ಸುಪ್ರೀಂಕೋರ್ಟ್ನ 2020 ರ ಅಕ್ಟೋಬರ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಹಲವಾರು ಹೋರಾಟಗಾರರಿಗೆ ದೊಡ್ಡ ಹೊಡೆತ ಸಿಕ್ಕಿದೆ, ಸುಪ್ರೀಂಕೋರ್ಟ್ ಶನಿವಾರ ತನ್ನ ಹಿಂದಿನ ತೀರ್ಪನ್ನು ಎತ್ತಿ ಹಿಡಿದಿದೆ.
ಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಅನಿರುದ್ಧ ಬೋಸ್ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠವು, “ಪ್ರತಿಭಟಿಸುವ ಹಕ್ಕು ಯಾವಾಗ ಬೇಕೋ ಆಗ ಮತ್ತು ಎಲ್ಲಿ ಬೇಕೋ ಅಲ್ಲಿ ಇರುವುದಿಲ್ಲ” ಎಂದು ಒತ್ತಿ ಹೇಳಿದೆ.
“ಕೆಲವು ಸ್ವಯಂಪ್ರೇರಿತ ಪ್ರತಿಭಟನೆಗಳನ್ನು ನಡೆಸಬಹುದು ಆದರೆ ದೀರ್ಘಕಾಲದ ಭಿನ್ನಾಭಿಪ್ರಾಯ ಅಥವಾ ಪ್ರತಿಭಟನೆಯ ಸಂದರ್ಭದಲ್ಲಿ, ಇತರರ ಹಕ್ಕುಗಳ ಮೇಲೆ ಪರಿಣಾಮ ಬೀರುವಂತೆ ಸಾರ್ವಜನಿಕ ಸ್ಥಳವನ್ನು ನಿರಂತರವಾಗಿ ಆಕ್ರಮಿಸಿಕೊಳ್ಳಲಾಗುವುದಿಲ್ಲ” ಎಂದು ನ್ಯಾಯಪೀಠ ಹೇಳಿದೆ.
ಮುಕ್ತ ನ್ಯಾಯಾಲಯದಲ್ಲಿ ಪರಿಶೀಲನಾ ಅರ್ಜಿಯ ಮೌಖಿಕ ವಿಚಾರಣೆಯ ಕೋರಿಕೆಯನ್ನು ನ್ಯಾಯಪೀಠ ಅಲ್ಲಗೆಳೆದಿದೆ. ಕನಿಜ್ ಫಾತಿಮಾ ಮತ್ತು ಇತರ 11 ಕಾರ್ಯಕರ್ತರು ಈ ಮನವಿಯನ್ನು ಸಲ್ಲಿಸಿದ್ದರು.
2020 ರ ಅಕ್ಟೋಬರ್ನಲ್ಲಿ ಸುಪ್ರೀಂ ಕೋರ್ಟ್, ಗೊತ್ತುಪಡಿಸಿದ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಬೇಕು ಮತ್ತು ಗೊತ್ತುಪಡಿಸಿದ ಸ್ಥಳಗಳ ಹೊರಗೆ ಪ್ರತಿಭಟನೆ ನಡೆಸುವ ವ್ಯಕ್ತಿಗಳನ್ನು ವಶಕ್ಕೆ ಪಡೆಯುವ ಹಕ್ಕು ಪೊಲೀಸರಿಗೆ ಇದೆ” ಎಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.