ಉಡುಪಿ: ವಿಶ್ವದ ಪ್ರಸಿದ್ಧ ಆಕ್ಸ್ಫರ್ಡ್ ಯೂನಿವರ್ಸಿಟಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಉಡುಪಿಯ ಮಣಿಪಾಲ ಮೂಲದ ರಶ್ಮಿ ಸಾಮಂತ್ ಅವರು ಆಯ್ಕೆಯಾಗಿದ್ದಾರೆ.
ಆ ಮೂಲಕ ಆಕ್ಸ್ಫರ್ಡ್ನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ವಿದ್ಯಾರ್ಥಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಥಾನಕ್ಕೆ ಒಟ್ಟು ನಾಲ್ಕು ಜನರು ಸ್ಪರ್ಧಿಸಿದ್ದು, ಅವರಲ್ಲಿ ಬಹುಮತಗಳನ್ನು ಗಳಿಸಿ ರಶ್ಮಿ ಅವರು ಆಯ್ಕೆಯಾಗಿದ್ದಾರೆ. ಉಳಿದ ಮೂರು ಜನರಿಗೆ ದೊರೆತ ಒಟ್ಟು ಮತಗಳಿಗಿಂತ ಹೆಚ್ಚು ಮತಗಳನ್ನು ರಶ್ಮಿ ಪಡೆದಿದ್ದು, ಆ ಮೂಲಕವೂ ದಾಖಲೆ ಸೃಷ್ಟಿಸಿದ್ದಾರೆ.
ಮಣಿಪಾಲದ ದಿನೇಶ್ ಸಾಮಂತ್ – ವತ್ಸಲಾ ಸಮಂತ್ ದಂಪತಿ ಪುತ್ರಿ ರಶ್ಮಿ, ಉಡುಪಿಯಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿದ್ದಾರೆ. ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಳೆದ ವರ್ಷವಷ್ಟೇ ಎಂಜಿನಿಯರಿಂಗ್ ಪದವಿಯನ್ನು ಪೂರೈಸಿದ್ದಾರೆ. ಆ ಬಳಿಕ ಉನ್ನತ ಶಿಕ್ಷಣಕ್ಕಾಗಿ ಆಕ್ಸ್ಫರ್ಡ್ಗೆ ಸೇರಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.