ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ, ಅರೆ ಸರ್ಕಾರಿ ಮತ್ತು ವಾರ್ಷಿಕ ವರಮಾನ 1.20 ಲಕ್ಷಕ್ಕಿಂತ ಹೆಚ್ಚಿರುವವರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರೆ ಅದನ್ನು ಸರ್ಕಾರಕ್ಕೆ ಹಿಂದಿರುಗಿಸುವಂತೆ ಈ ಹಿಂದೆಯೇ ಸರ್ಕಾರ ಸೂಚಿಸಿದ್ದು, ಮಾರ್ಚ್ ಅಂತ್ಯದ ವರೆಗೆ ಅವಕಾಶವಿದೆ ಎಂದು ಸಚಿವ ಉಮೇಶ್ ಕತ್ತಿ ಅವರು ತಿಳಿಸಿದ್ದಾರೆ.
ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಮೊದಲಾದವುಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ, ಅದನ್ನು ತಕ್ಷಣದಲ್ಲೇ ರದ್ದುಪಡಿಸಿಕೊಳ್ಳುವಂತೆ ಕತ್ತಿ ಸೂಚಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಹೊಂದಿರುವವರ ಬಗ್ಗೆ ಸರ್ಕಾರವೇ ಆಧಾರ್ ಕಾರ್ಡ್ ಸಹಾಯದಿಂದ ಮಾಹಿತಿ ಸಂಗ್ರಹ ಮಾಡಲಿದ್ದು, ಈ ಸಂದರ್ಭದಲ್ಲಿ ಅಕ್ರಮ ಬಿಪಿಎಲ್ ಕಾರ್ಡುದಾರರ ಮೇಲೆ ದಂಡ ಮತ್ತು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉಮೇಶ್ ಕತ್ತಿ ತಿಳಿಸಿದ್ದಾರೆ.
ಹಾಗೆಯೇ ಉತ್ತರ ಕರ್ನಾಟಕ ಭಾಗದ ಬಿಪಿಎಲ್ ಕಾರ್ಡುದಾರರಿಗೆ ಪಡಿತರವಾಗಿ ಅಕ್ಕಿಯ ಜೊತೆಗೆ ಜೋಳ, ದಕ್ಷಿಣದ ಭಾಗಗಳಲ್ಲಿ ಅಕ್ಕಿಯ ಜೊತೆಗೆ ರಾಗಿ ವಿತರಣೆಗೂ ಕ್ರಮ ಕೈಗೊಳ್ಳಲಾಗುತ್ತದೆ. ಈ ಚಿಂತನೆಗೆ ಕೇಂದ್ರ ಸರ್ಕಾರವೂ ಸಮ್ಮತಿ ಸೂಚಿಸಿದೆ. ಎಪ್ರಿಲ್ 1 ರಿಂದ ತೊಡಗಿದಂತೆ ಎರಡು ಕೆಜಿ ಅಕ್ಕಿ ಜೊತೆಗೆ 3 ಕೆಜಿ ಜೋಳ ಯಾ ರಾಗಿ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ರಾಜ್ಯದ ರೈತರಿಂದ ಅಕ್ಕಿ, ರಾಗಿ, ಜೋಳ ಮೊದಲಾದ ಧಾನ್ಯಗಳ ಖರೀದಿಗೂ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.