ಬೆಂಗಳೂರು: ಬಿಪಿಎಲ್ ಕಾರ್ಡುಗಳಿಗೆ ಸಂಬಂಧಿಸಿದಂತೆ ಈ ಹಿಂದಿನ ನಿಯಮಾವಳಿಗಳೇ ಅನ್ವಯವಾಗಲಿವೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬಿಪಿಎಲ್ ಕಾರ್ಡುಗಳ ಮಾನದಂಡಗಳನ್ನು ಬದಲಾಯಿಸುವುದಿಲ್ಲ. ಈ ಹಿಂದೆ ಬಿಪಿಎಲ್ ಕಾರ್ಡ್ ಪಡೆಯುವುದಕ್ಕೆ ಯಾವ ಮಾನದಂಡಗಳಿತ್ತೋ ಅದೇ ನಿಯಮಗಳನ್ನು ಮುಂದುವರಿಸುವುದಾಗಿ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ಈ ಹಿಂದೆ ಬೈಕ್, ಫ್ರಿಡ್ಜ್ ಮೊದಲಾದ ವಸ್ತುಗಳನ್ನು ಹೊಂದಿರುವ ಮಧ್ಯಮ ವರ್ಗಕ್ಕೂ ಬಿಪಿಎಲ್ ಕಾರ್ಡ್ ಸೌಲಭ್ಯ ಇಲ್ಲ. ಈಗಾಗಲೇ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದಲ್ಲಿ ಅದನ್ನು ರದ್ದು ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಈ ಕ್ರಮದಿಂದ ಬಡ ಜನರಿಗೆ ತೊಂದರೆ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಹಿಂಪಡೆಯಲಾಗಿದೆ. ಹಾಗೆಯೇ ಈ ಹಿಂದಿನ ನಿಯಮಾವಳಿಗಳೇ ಮುಂದುವರಿಯಲಿವೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.