ಬೆಂಗಳೂರು: ರಾಜ್ಯದಲ್ಲಿ ಲಂಬಾಣಿ ಸಂಸ್ಕೃತಿ, ಸಾಹಿತ್ಯ, ಭಾಷೆ ಮೊದಲಾದವುಗಳನ್ನು ಸಂರಕ್ಷಣೆ ಮಾಡುವ, ಪ್ರಚುರಪಡಿಸುವ ಉದ್ದೇಶದಿಂದ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಕಟ್ಟಡದಲ್ಲಿ ಅಕಾಡೆಮಿಯ ತಾತ್ಕಾಲಿಕ ಪ್ರಧಾನ ಕಚೇರಿ ಆರಂಭಿಸಲು ತೀರ್ಮಾನಿಸಲಾಗಿದೆ. ಕೊಪ್ಪಳದ ಬಹದ್ದೂರ್ ಬಂಡೆ ಪ್ರದೇಶದಲ್ಲಿನ ಬಂಜಾರ ಭವನದಲ್ಲಿ ಶಾಖಾ ಕಚೇರಿ ಸ್ಥಾಪಿಸಲು ಉದ್ದೇಶಿಸಿರುವುದಾಗಿ ಅವರು ಹೇಳಿದರು.
ರಾಜ್ಯದ ಇತರ ಭಾಷಾ ಅಕಾಡೆಮಿ ನಿಗಮಗಳಿಗೆ ನೀಡಿದಂತೆ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ನಿಗಮಗಳಿಗೆ ಬಜೆಟ್ನಲ್ಲಿ ಅನುದಾನ ನೀಡಲಾಗುವುದು. ಶೀಘ್ರದಲ್ಲೇ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.