ಬೆಂಗಳೂರು: ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ. ರಾಮ ಜೋಯಿಸ್ (90) ಅವರು ಇಂದು ಮುಂಜಾನೆ 7.30 ಸುಮಾರಿಗೆ ಬೆಂಗಳೂರಿನ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಶಿವಮೊಗ್ಗ ಮೂಲದ ರಾಮ ಜೋಯಿಸ್ ಅವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ, ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೂ ಆಯ್ಕೆಯಾಗಿದ್ದ ರಾಮ ಜೋಯಿಸರು, ಬಿಹಾರ ಮತ್ತು ಜಾರ್ಖಂಡ್ನ ಮಾಜಿ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನ ರಾಜಾಜಿನಗರದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇಂದು ಸಂಜೆ 4 ಗಂಟೆ ಸುಮಾರಿಗೆ ಅಂತಿಮ ಸಂಸ್ಕಾರ ನಡೆಯಲಿದೆ. ರಾಮಾ ಜೋಯಿಸ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Justice M Rama Jois (89 years) passed away. He served as member of Rajya Sabha and also as governor of Jharkhand & Bihar states. Justice Jois also served as Chief Justice of the Punjab & Haryana High Court@NewIndianXpress @santwana99 @ramupatil_TNIE @XpressBengaluru pic.twitter.com/hQBxJqEn1i
— Ashwini M Sripad/ಅಶ್ವಿನಿ ಎಂ ಶ್ರೀಪಾದ್🇮🇳 (@AshwiniMS_TNIE) February 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.