ಬೆಂಗಳೂರು: ಕೊರೋನಾ ಬಳಿಕ ರಾಜ್ಯದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಜೊತೆಗೆ 9 – 12 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಮಾಡಲಾಗಿದೆ. ಇದೀಗ 6-8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೂ ಪೂರ್ಣ ಅವಧಿಯ ನೇರ ತರಗತಿಗಳನ್ನು ಆರಂಭ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
6-8 ನೇ ತರಗತಿ ವರೆಗಿನ ಶಾಲಾರಂಭಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿಂದು ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ತಜ್ಞರು, ಅಧಿಕಾರಿಗಳ ನಡುವೆ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ 6-8 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣಾವಧಿಯ ತರಗತಿಗಳನ್ನು ಆರಂಭ ಮಾಡುವ ಸಂಬಂಧ ಚರ್ಚೆ ನಡೆಸಲಾಯಿತು. ಈ ಚರ್ಚೆಯಲ್ಲಿ ಮುಂದಿನ ಸೋಮವಾರ (22-2-2021)ದಿಂದ ನೇರ, ಪೂರ್ಣಾವಧಿಯ ತರಗತಿಗಳನ್ನು ಆರಂಭ ಮಾಡಲು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಹಾಗೆಯೇ 1-5 ನೇ ತರಗತಿಗಳಿಗೆ ಸಂಬಂಧಿಸಿದಂತೆ ವಿದ್ಯಾಗಮ ಯೋಜನೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಸಂಪೂರ್ಣ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡೇ 6-8 ನೇ ತರಗತಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರೆ. ಸಾಧಕ ಬಾಧಕಗಳನ್ನು ಪರಿಶೀಲಿಸಿಕೊಂಡು 1-5 ನೇ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಾಗಿಯೂ ಮೂಲಗಳು ಹೇಳಿವೆ.
ಬೆಂಗಳೂರು ನಗರ, ಕೇರಳ ಗಡಿ ಭಾಗಗಳಲ್ಲಿ 6 ಮತ್ತು 7 ನೇ ತರಗತಿಗಳನ್ನು ಕೊರೋನಾ ಹಿನ್ನೆಲೆಯಲ್ಲಿ ಆರಂಭ ಮಾಡಲಾಗುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.