ಶಿವಮೊಗ್ಗ: ಬಿಪಿಎಲ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ 2017 ರ ಮಾನದಂಡವೇ ಮುಂದುವರಿಯಲಿದೆ. ಆದರೆ ಬಡತನ ರೇಖೆಗಿಂತ ಮೇಲ್ಪಟ್ಟವರು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮವಾಗಿ ಕಾರ್ಡುಗಳನ್ನು ಪಡೆದುಕೊಂಡಿರುವವರು ಅವುಗಳನ್ನು ವಾಪಾಸ್ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಬಡವರಿಗೆ ದೊರೆಯಬೇಕಾದ ಆಹಾರ ಭದ್ರತೆಯಲ್ಲಿ ಅಕ್ರಮಗಳಾಗುವುದನ್ನು ತಡೆಯಬೇಕಿದೆ. ಶ್ರೀಮಂತರೂ ಸಹ ಬಿಪಿಎಲ್ ಕಾರ್ಡ್ ಮೂಲಕ ಸಾಮಾನ್ಯರ ಆಹಾರ ಅಗತ್ಯತೆಗಳಲ್ಲಿ ಅಕ್ರಮ ಎಸಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅನಗತ್ಯವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವವರಿಂದ ಅವುಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ಅವರು ಹೇಳಿದ್ದಾರೆ.
ರಾಜ್ಯದ ಬಡ ಜನರಿಗೆ ಆಹಾರ ಸಮಸ್ಯೆ ಉದ್ಭವವಾಗಬಾರದು ಎಂಬ ಕಾರಣದಿಂದ ಬಿಪಿಎಲ್ ಕಾರ್ಡ್ಗಳ ಮೂಲಕ ಆಹಾರ ಹಂಚಿಕೆ ಮಾಡಲಾಗುತ್ತಿದೆ. ಹಾಗೆಯೇ ಬಿಪಿಎಲ್ ಕಾರ್ಡು ಹೊಂದುವುದಕ್ಕೆ ಸಂಬಂಧಿಸಿದಂತೆ 2017 ರ ನಿಯಮಗಳೇ ಅನ್ವಯವಾಗಲಿದ್ದು, ಈ ಬಗ್ಗೆ ಜನರಲ್ಲಿ ಸಂದೇಹಗಳು, ಗೊಂದಲಗಳು ಬೇಡ ಎಂದು ವಿವರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.