ವಾಷಿಂಗ್ಟನ್: ಅಮೆರಿಕ ಮತ್ತು ಯುನೈಟೆಡ್ ಕಿಂಗ್ಡಮ್ ಸೇರಿದಂತೆ 15 ದೇಶಗಳಲ್ಲಿ 200 ಕ್ಕೂ ಹೆಚ್ಚು ಭಾರತೀಯ ಮೂಲದ ಜನರು ನಾಯಕತ್ವದ ಸ್ಥಾನಗಳನ್ನು ಹೊಂದಿದ್ದಾರೆ. ಈ ಪೈಕಿ 60 ಮಂದಿ ಸಂಪುಟ ಶ್ರೇಯಾಂಕಗಳನ್ನು ಹೊಂದಿದ್ದಾರೆ.
ಸರ್ಕಾರಿ ವೆಬ್ಸೈಟ್ಗಳು ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ಇತರ ಸಂಪನ್ಮೂಲಗಳಿಂದ ತಯಾರಿಸಲ್ಪಟ್ಟ 2021ರ ಇಂಡಿಯಾಸ್ಪೊರಾ ಗವರ್ನ್ಮೆಂಟ್ ಲೀಡರ್ಸ್ ಲಿಸ್ಟ್ ಸೋಮವಾರ ಭಾರತೀಯ ಮೂಲದ 200 ಕ್ಕೂ ಹೆಚ್ಚು ರಾಜಕೀಯ ನಾಯಕರನ್ನು ಗುರುತಿಸಿದೆ, ಅವರು ವಿಶ್ವದಾದ್ಯಂತ 15 ದೇಶಗಳಲ್ಲಿ ಸಾರ್ವಜನಿಕ ಸೇವೆಯ ಅತ್ಯುನ್ನತ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಪೈಕಿ 60 ಕ್ಕೂ ಹೆಚ್ಚು ನಾಯಕರು ಸಂಪುಟ ಸ್ಥಾನಗಳನ್ನು ಹೊಂದಿದ್ದಾರೆ.
“ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಅಮೆರಿಕಾದ ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಮೂಲದವರಾಗಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಭಾರತೀಯ ಪರಂಪರೆಯ ಮೊದಲ ವ್ಯಕ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ” ಎಂದು ಸಿಲಿಕಾನ್ ವ್ಯಾಲಿ ಮೂಲದ ಉದ್ಯಮಿ ಮತ್ತು ಹೂಡಿಕೆದಾರ ಇಂಡಿಯಾಸ್ಪೊರಾ ಸಂಸ್ಥಾಪಕ ಎಂ.ಆರ್ ರಂಗಸ್ವಾಮಿ ಹೇಳಿದ್ದಾರೆ.
“ಈ ನಾಯಕರು ಭವಿಷ್ಯದ ಪೀಳಿಗೆಗೆ ಒಂದು ಪರಂಪರೆಯನ್ನು ನಿರ್ಮಿಸುತ್ತಿದ್ದಾರೆ ಮತ್ತು ಅವರು ನಮ್ಮ ಸಮುದಾಯವನ್ನು ಮೀರಿ ಅವರು ಸೇವೆ ಸಲ್ಲಿಸುತ್ತಾ ಎಲ್ಲಾ ಕ್ಷೇತ್ರ ಮತ್ತು ಸಮುದಾಯಗಳಿಗೆ ವಿಸ್ತರಿಸಿದ್ದಾರೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಸ್ಟ್ರೇಲಿಯಾ, ಕೆನಡಾ, ಸಿಂಗಾಪುರ್, ದಕ್ಷಿಣ ಆಫ್ರಿಕಾ, ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್ಡಮ್, ಮತ್ತು ಯುನೈಟೆಡ್ ಸ್ಟೇಟ್ಸ್ನಂತಹ ಭಾರತೀಯ ವಲಸಿಗರ ವಲಸೆಯ ಮಹತ್ವದ ಇತಿಹಾಸ ಹೊಂದಿರುವ ದೇಶಗಳ ರಾಜತಾಂತ್ರಿಕರು, ಶಾಸಕರು, ಕೇಂದ್ರ ಬ್ಯಾಂಕುಗಳ ಮುಖ್ಯಸ್ಥರು ಮತ್ತು ಹಿರಿಯ ನಾಗರಿಕ ಸೇವಕರು ಈ ಪಟ್ಟಿಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.