ಬೆಂಗಳೂರು: ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾನ ಬಳಕೆಗೆ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಸಚಿವ ಕೆ ಸಿ ನಾರಾಯಣ ಗೌಡ ಸೂಚಿಸಿದ್ದಾರೆ.
ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ಉನ್ನತ ಶಿಕ್ಷಣ, ಇಂಧನ ಇಲಾಖೆ, ತೋಟಗಾರಿಕೆ ಸೇರಿದಂತೆ 17 ಇಲಾಖೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ನಿಯಮ ರೂಪಿಸುವುದಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದಾರೆ.
ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಕೃಷಿ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉದ್ಯಮ ವಲಯ ಸೇರಿದಂತೆ ಹಿಂದುಳಿದ ತಾಲೂಕುಗಳಿಗೆ ಸಂಬಂಧಿಸಿದಂತೆ ಏನೇನು ಕೆಲಸಗಳು ನಡೆಯಬೇಕು ಎಂಬ ಬಗ್ಗೆ, ಅದಕ್ಕೆ ಬೇಕಾಗುವ ಅನುದಾನದ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. ಎಸ್ಡಿಪಿ ಅಡಿಯಲ್ಲಿ ಹಂಚಿಕೆ ಮಾಡಲಾಗುವ ಅನುದಾನ ಸರಿಯಾದ ರೀತಿಯಲ್ಲಿ ಬಳಕೆಯಾಗುವಂತೆ ಗಮನ ಹರಿಸಬೇಕು. ಸಾಮಾನ್ಯ ಅನುದಾನದಲ್ಲಿ ಈ ಅನುದಾನವನ್ನು ಸೇರ್ಪಡೆ ಮಾಡುವಂತಿಲ್ಲ. ಅದರಂತೆ ಪ್ರತಿ ಇಲಾಖೆಗೆ ಹಂಚಿಕೆ ಮಾಡಲಾದ ಅನುದಾನದ ಸಮರ್ಪಕ ಬಳಕೆಗೆ ಆಯಾ ಇಲಾಖೆಗಳು ಪೂರಕ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.