ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದ 75 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಇದುವರೆಗೂ ಯಾವುದೇ ವೈದ್ಯಕೀಯ ಕಾಲೇಜುಗಳು ಇಲ್ಲದ ಒಟ್ಟು 16 ಜಿಲ್ಲೆಗಳಲ್ಲಿ ಶೀಘ್ರವೇ ಸಾರ್ವಜನಿಕ-ಖಾಸಗಿ-ಸಹಭಾಗಿತ್ವ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಮತ್ತು ಇತರ ವೈದ್ಯಕೀಯ ಕಾಲೇಜುಗಳನ್ನು ನವೀಕರಿಸಲಾಗುವುದು. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹೊಸ ನೀತಿಯನ್ನು ಪರಿಚಯಿಸಲಿದೆ ಎಂದಿದ್ದಾರೆ.
ಸರ್ಕಾರದ ವಕ್ತಾರರ ಪ್ರಕಾರ, ರಾಜ್ಯ ಸರ್ಕಾರವು ತಳಮಟ್ಟದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸಲು ಬಯಸಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಸರ್ಕಾರ ಹೆಚ್ಚಿಸಲಿದೆ.
ಗೋರಖ್ಪುರ, ಆಗ್ರಾ, ವಾರಣಾಸಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಯೋಗಿ ಸರ್ಕಾರ ಸಿದ್ಧವಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು ಎರಡು ತಿಂಗಳ ಹಿಂದೆ, ಮುಂಬೈನ ಕೆಲವು ಉನ್ನತ ಉದ್ಯಮಿಗಳೊಂದಿಗೆ ಸಂವಹನ ನಡೆಸಿದ್ದು, ಈ ವೇಳೆ “ಉತ್ತರ ಪ್ರದೇಶದ ಒಟ್ಟು 75 ಜಿಲ್ಲೆಗಳಿಗೆ ವೈದ್ಯಕೀಯ ಕಾಲೇಜುಗಳು ಬೇಕಾಗುತ್ತವೆ. ಸರ್ಕಾರ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲು ಮುಕ್ತ ಅವಕಾಶವಿದೆ. ಜೊತೆಗೆ ರಾಜ್ಯಕ್ಕೆ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಈ ಆಸ್ಪತ್ರೆಗಳನ್ನು ಸ್ಥಾಪಿಸಲು ಬಯಸುವವರಿಗೆ ಉತ್ತರಪ್ರದೇಶ ಸರ್ಕಾರ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.
ಗೋರಖ್ಪುರ ಮತ್ತು ರಾಯ್ ಬರೇಲಿಯಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆಯು ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳ ದೃಷ್ಟಿಯಿಂದ ಒಂದು ಮೈಲಿಗಲ್ಲು ಎಂದು ಈಗಾಗಲೇ ಸಾಬೀತಾಗಿದೆ. ಒಟ್ಟು ಈ ಎಲ್ಲಾ ಯೋಜನೆಗಳ ವೆಚ್ಚಕ್ಕಾಗಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಹಾಗೂ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ವ್ಯಯಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.