ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಸ್ವಾಮೀಜಿ, ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ. ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಮಾಡದವರ ಮನೆಗಳನ್ನು ಗುರುತು ಮಾಡಲಾಗುತ್ತಿದೆ ಎಂಬ ಆರೋಪ ಗಂಭೀರವಾದದ್ದು. ಇದಕ್ಕೆ ಕುಮಾರಸ್ವಾಮಿ ಅವರು ಸಾಕ್ಷ್ಯ ಒದಗಿಸುವ ಕೆಲಸವನ್ನು ಮಾಡಬೇಕು. ಆಧಾರ ರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ನಿಧಿ ಸಮರ್ಪಿಸಿದವರ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ನಿಧಿ ನೀಡದವರ ಮನೆಗಳನ್ನು ಗುರುತು ಮಾಡುವಂತೆ ಆರ್ಎಸ್ಎಸ್ ಸೂಚಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಅಭಿಯಾನಕ್ಕೆ ದೇಶದೆಲ್ಲೆಡೆಯಿಂದ ನಿರೀಕ್ಷೆಗೂ ಮೀರಿ ನಿಧಿ ಸಂಗ್ರಹವಾಗುತ್ತಿದೆ. ಇದರ ಕೂಪನ್, ರಶೀದಿಗಳ ಕೊರತೆಯೂ ಉಂಟಾಗಿದೆ. ಹಾಗಾಗಿ ಮುಂದೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಮನೆಗಳ ಗುರುತು ಮಾಡಿರಬಹುದು. ಈ ನಡೆ ತಪ್ಪಲ್ಲ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.