ಮಂಗಳೂರು: ರಾಜ್ಯದಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಪ್ರಸಿದ್ಧಿ ಪಡೆದಿರುವ ಕರಾವಳಿಯಲ್ಲಿ ಮೀನುಗಾರರು ಬೋಟ್ಗಳಿಗೆ ಬಳಸಲು ಸೀಮೆ ಎಣ್ಣೆ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಅಂಗಾರ ಅವರು ಸೀಮೆ ಎಣ್ಣೆ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ 8822 ಕಿಲೋ ಲೀಟರ್ ಸೀಮೆ ಎಣ್ಣೆ ಬಿಡುಗಡೆ ಮಾಡಿದೆ.
ಸೀಮೆ ಎಣ್ಣೆಯ ಕೊರತೆಯಿಂದಾಗಿ ಮೀನುಗಾರರು ಸಮಸ್ಯೆ ಅನುಭವಿಸುವಂತಾಗಿತ್ತು. ಈ ಸಂಬಂಧ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಸಚಿವ ಅಂಗಾರ ಅವರ ಬಳಿ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಮೂಲಕ ಕೇಂದ್ರ ಸರ್ಕಾರಕ್ಕೆ ಸಚಿವರು ಮನವಿ ಸಲ್ಲಿಸಿದ್ದರು. ಈ ವಿನಂತಿಯನ್ನು ಪುರಸ್ಕರಿಸಿರುವ ಕೇಂದ್ರ, ತಕ್ಷಣವೇ ಸೀಮೆ ಎಣ್ಣೆ ಬಿಡುಗಡೆ ಮಾಡುವ ಮೂಲಕ ರಾಜ್ಯದ ಕರಾವಳಿಯ ಮೀನುಗಾರರ ಹಿತ ಕಾಪಾಡಲು ಮುಂದಾಗಿದೆ.
2021 ರಲ್ಲಿ ರಾಜ್ಯದ ಪಾಲಿಗೆ ದೊರೆಯಬೇಕಿದ್ದ 7020 ಕಿಲೋ ಲೀಟರ್ ಸೀಮೆ ಎಣ್ಣೆಯ ಜೊತೆಗೆ, 1802 ಕಿಲೋ ಲೀಟರ್ಗಳಷ್ಟು ಸೀಮೆ ಎಣ್ಣೆಯನ್ನು ಸಬ್ಸಿಡಿ ರಹಿತವಾಗಿ ರಾಜ್ಯಕ್ಕೆ ಒದಗಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಪತ್ರದ ಮುಖೇನ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.