ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಬಗ್ಗೆ ವಿರೋಧ ಪಕ್ಷಗಳು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಕನಿಷ್ಠ ರಾಮ ಮಂದಿರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಆಗಲಿ, ಸಂಘ ಪರಿವಾರವಾಗಲಿ ಅಥವಾ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದಲ್ಲಿ ತೊಡಗಿಸಿಕೊಂಡ ಇನ್ಯಾವುದೇ ಸಂಘಟನೆಯ ಕಾರ್ಯಕರ್ತರಿರಲಿ, ಎಲ್ಲಿಯೂ ಒತ್ತಾಯಪೂರ್ವಕವಾಗಿ ನಿಧಿ ಸಮರ್ಪಿಸುವಂತೆ ಒತ್ತಡ ಹೇರಿಲ್ಲ ಎಂದು ಅವರು ತಿಳಿಸಿದ್ದಾರೆ.
ನಿಧಿ ಸಮರ್ಪಣಾ ಅಭಿಯಾನಕ್ಕೆ ಜನರು ಸ್ವಯಂಪ್ರೇರಿತರಾಗಿ ತಮ್ಮ ಶಕ್ತ್ಯಾನುಸಾರ ನಿಧಿ ಅರ್ಪಣೆ ಮಾಡುತ್ತಿದ್ದಾರೆ. ಒತ್ತಾಯಪೂರ್ವಕವಾಗಿ ನಿಧಿ ಸಂಗ್ರಹ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷದ ನಾಯಕರ ವಾದ ಹುರುಳಿಲ್ಲದ್ದು. ಯಾರ ಓಲೈಕೆ ಮಾಡುವುದಕ್ಕೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೋ ಅರಿವಾಗುತ್ತಿಲ್ಲ. ಬೇರೆಯವರ ಬಗ್ಗೆ ಮಾತನಾಡುವ ಮೊದಲು ನಾವು ಸರಿ ಇದ್ದೇವಾ ಎಂಬುದನ್ನು ವಿರೋಧ ಪಕ್ಷದ ನಾಯಕರು ನೋಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.