ವಾಷಿಂಗ್ಟನ್: ಮಾನವ ಹಕ್ಕುಗಳ ಉಲ್ಲಂಘನೆ ನಡೆಸುತ್ತಿರುವ ಚೀನಾ ತಕ್ಕ ಬೆಲೆ ತೆರಲಿದೆ ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಮಂಗಳವಾರ ಎಚ್ಚರಿಸಿದ್ದಾರೆ.
ಚೀನಾ ತನ್ನ ದೂರದ ಪಶ್ಚಿಮ ಪ್ರದೇಶವಾದ ಕ್ಸಿನ್ಜಿಯಾಂಗ್ನಲ್ಲಿ ಮುಸ್ಲಿಂ ಅಲ್ಪಸಂಖ್ಯಾತರನ್ನು ನಿಭಾಯಿಸುವ ಕುರಿತು ಮಾಧ್ಯಮವೊಂದರಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದಕ್ಕೆಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಲ್ಪಸಂಖ್ಯಾತ ಉಯಿಘರ್ ಮುಸ್ಲಿಂರನ್ನು ಬಂಧನ ಶಿಬಿರಗಳಲ್ಲಿ ಇರಿಸುತ್ತಿದ್ದಾರೆ. ಇತರ ಇತರ ಮಾನವ ಹಕ್ಕುಗಳ ಉಲ್ಲಂಘನೆ ಕೃತ್ಯಗಳಿಗಾಗಿಯೂ ಜಾಗತಿಕವಾಗಿ ಟೀಕಿಗೆ ಒಳಗಾಗುತ್ತಿದ್ದಾರೆ.
“ಈ ಕೃತ್ಯಕ್ಕೆ ಚೀನಾ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ಇದೂ ಅವರಿಗೂ ತಿಳಿದಿದೆ” ಎಂದು ಬೈಡೆನ್ ಕ್ಸಿ ಬಗ್ಗೆ ಬ್ರಾಡ್ಕಾಸ್ಟರ್ ಸಿಎನ್ಎನ್ ನಲ್ಲಿ ಪ್ರಸಾರವಾದ ಟೌನ್ ಹಾಲ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಮಾನವ ಹಕ್ಕುಗಳ ಬಗ್ಗೆ ಮಾತನಾಡುವುದರಲ್ಲಿ ಯುನೈಟೆಡ್ ಸ್ಟೇಟ್ಸ್ ತನ್ನ ಜಾಗತಿಕ ಪಾತ್ರವನ್ನು ಪುನರುಚ್ಚರಿಸಲಿದೆ ಎಂದು ಬೈಡೆನ್ ಹೇಳಿದ್ದಾರೆ, ಚೀನಾ ತನ್ನ ಜನರನ್ನು ರಕ್ಷಿಸುವಂತೆ ಮಾಡಲು ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಕೆಲಸ ಮಾಡುವುದಾಗಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.