ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೀನುಗಾರಿಕೆಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಇದೀಗ ಟ್ರೋಲ್ಗೆ ಒಳಗಾಗುತ್ತಿದ್ದಾರೆ, ಬಿಜೆಪಿ ನಾಯಕರು ಕಾಂಗ್ರೆಸ್ ಮುಖಂಡರನ್ನು ಇಟಾಲಿಯನ್ ಭಾಷೆಯಲ್ಲಿ ಕಿಚಾಯಿಸುತ್ತಿದ್ದಾರೆ.
ತಮಿಳುನಾಡಿಗೆ ತೆರಳಿದ್ದ ರಾಹುಲ್ ಗಾಂಧಿ ಅವರು, ದೆಹಲಿಯಲ್ಲಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯವನ್ನು ಸ್ಥಾಪನೆ ಮಾಡುವ ಅಗತ್ಯವಿದೆ ಎಂದಿದ್ದಾರೆ. ಆದರೆ ನರೇಂದ್ರ ಮೋದಿ ಸರ್ಕಾರ 2019ರಲ್ಲೇ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯವನ್ನು ಸ್ಥಾಪನೆ ಮಾಡಿದೆ.
ರಾಹುಲ್ ಅವರಿಗೆ ಟ್ವೀಟ್ ಮಾಡಿ ಕಿಚಾಯಿಸಿರುವ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕಾ ಸಚಿವ ಗಿರಿರಾಜ್ ಸಿಂಗ್ ಅವರು, ‘ಇಟಲಿಯಲ್ಲಿ ಪ್ರತ್ಯೇಕ ಮೀನುಗಾರಿಕೆ ಸಚಿವಾಲಯ ಇಲ್ಲ. ಅದು ಕೃಷಿ ಮತ್ತು ಅರಣ್ಯ ಸಚಿವಾಲಯದಡಿ ಬರುತ್ತದೆ” ಎಂದಿದ್ದಾರೆ. ವಿಶೇಷವೆಂದರೆ ಇಟಲಿ ಭಾಷೆಯಲ್ಲೇ ಇದನ್ನು ಹೇಳಿದ್ದಾರೆ.
ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರು ಇಟಲಿ ಭಾಷೆಯ ಟ್ವೀಟ್ ಮೂಲಕ ರಾಹುಲ್ ಅವರ ಕಾಲೆಳೆದಿದ್ದಾರೆ. “ಅವರಿಗೆ ಒಂದು ವಿಷಯ ಮಾತ್ರ ತಿಳಿದಿದೆ. ಸುಳ್ಳು, ಭಯ ಮತ್ತು ತಪ್ಪು ಮಾಹಿತಿ ಹರಡುವುದು” ಎಂದಿದ್ದಾರೆ.
Caro Raul (@RahulGandhi),
Non esiste un Ministero della pesca separato in Italia. Viene sotto Ministero delle Politiche Agricole e Forestali. https://t.co/Lv9x3r8ozK
— Shandilya Giriraj Singh (@girirajsinghbjp) February 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.