ಬೆಂಗಳೂರು: ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರಿಯಾಗಿ ಜಾರಿಗೊಳಿಸಲು ಅನುವಾಗುವಂತೆ 8000 ಮಂದಿ ಉಪನ್ಯಾಸಕರನ್ನು ನೇಮಕ ಮಾಡಬೇಕಾದ ಅವಶ್ಯಕತೆ ಇದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೌಲ್ಯಯುತ ಶಿಕ್ಷಣವನ್ನು ಸರಿಯಾದ ರೀತಿಯಲ್ಲಿ ಸಿಗುವಂತೆ ಮಾಡುವ ಉದ್ದೇಶದಿಂದ ಉಪನ್ಯಾಸಕರ ಹುದ್ದೆಗಳ ಭರ್ತಿ ಅಗತ್ಯವಾಗಿದೆ. 12 ಸಾವಿರದಷ್ಟು ಬೋಧಕೇತರ ಸಿಬ್ಬಂದಿಗಳ ಹುದ್ದೆ ಭರ್ತಿ ಮಾಡಬೇಕು ಎನ್ನುವ ಬೇಡಿಕೆಯೂ ಇಲಾಖೆಯ ಮುಂದಿದ್ದು, ಈ ಹಿನ್ನೆಲೆಯಲ್ಲಿ ತುರ್ತು ಅಗತ್ಯವೆನಿಸಿದ ಹುದ್ದೆಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂ ಮಾತುಕತೆ ನಡೆಸಲಾಗಿದೆ. ಕಳೆದ ವರ್ಷ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರೇ ಈ ಬಾರಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಅವರ ಬೇಡಿಕೆಗಳನ್ನೂ ಕ್ರಮಬದ್ಧವಾಗಿ ಪರಿಶೀಲಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಬೋಧನಾ ಗುಣಮಟ್ಟ ಹೆಚ್ಚಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.