ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ಜಾಲತಾಣಗಳಲ್ಲಿಯೂ ಸರ್ಕಾರದ ವತಿಯಿಂದಲೇ ರೂಪಿಸಲಾಗಿರುವ ಮಾನದಂಡಗಳ ವಿನ್ಯಾಸಗಳನ್ನು ಬಳಕೆ ಮಾಡಬೇಕು. ಜೊತೆಗೆ ಮುಖಪುಟದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ ನೀಡಬೇಕು ಎಂದು ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಂತೆ ಸುಮಾರು 1 ಸಾವಿರಕ್ಕೂ ಹೆಚ್ಚಿನ ಜಾಲತಾಣಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ರಾಜ್ಯ ದತ್ತಾಂಶ ಕೇಂದ್ರದಲ್ಲಿಯೇ ಸ್ಥಾಪನೆಯಾಗಬೇಕು. ಜೊತೆಗೆ karnataka.gov.in ಡೊಮೈನ್ ಜೊತೆಗೆ ಹೆಸರು ಸೇರ್ಪಡೆ ಮಾಡಬೇಕು ಎಂದು ಸರ್ಕಾರ ಈ ಆದೇಶದಲ್ಲಿ ತಿಳಿಸಿದೆ. ಈ ಮಾನದಂಡದಲ್ಲಿ ವಿಶೇಷ ಚೇತನರಿಗೆ ಅನುಕೂಲವಾಗುವಂತಹ ವ್ಯವಸ್ಥೆಗಳನ್ನು ಸಹ ಅನುಸರಿಸಬೇಕು, ಇದಕ್ಕಾಗಿ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂಬುದಾಗಿಯೂ ಸರ್ಕಾರ ಇಲಾಖೆಗಳಿಗೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ನಿಯಮಿತಗಳು, ಸಂಸ್ಥೆಗಳು, ಅಕಾಡೆಮಿಗಳು, ನೋಂದಾಯಿತ ಸಹಕಾರಿ ಸೊಸೈಟಿಗಳು, ಟ್ರಸ್ಟ್ಗಳು ಮತ್ತು ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಹಾಗೆಯೇ, ಇದನ್ನು ಆಗಿಂದಾಗ್ಗೆ ಪರಿಷ್ಕರಣೆ, ಮಾಹಿತಿಗಳನ್ನು ಆಗಿಂದಾಗ್ಗೆ ಜನರಿಗೆ ತಲುಪಿಸುವ ಕೆಲಸವನ್ನು ಸಹ ಮಾಡಬೇಕು ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.