ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ ತಿಂಗಳಿನಿಂದ ತೊಡಗಿದಂತೆ 50 ವರ್ಷಗಳ ಮೇಲ್ಪಟ್ಟವರಿಗೆ ಮತ್ತು ದೀರ್ಘಕಾಲೀಕ ಅನಾರೋಗ್ಯದ ಸಮಸ್ಯೆ ಅನುಭವಿಸುತ್ತಿರುವವರಿಗೆ ಕೊರನಾ ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ವಯಸ್ಸಿನ ಮಾನದಂಡವನ್ನು ತಿಳಿದುಕೊಳ್ಳುವ ಸಲುವಾಗಿ ಮತದಾರರ ಗುರುತಿನ ಚೀಟಿಯನ್ನು ಅನುಸರಿಸಲಾಗುತ್ತಿದೆ. 50 ವರ್ಷಕ್ಕಿಂತ ಕೆಳಗಿನ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ಜನರ ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನಡೆಸಿರುವ ಸಮೀಕ್ಷಾ ವರದಿಗಳ ದಾಖಲೆಯನ್ನು ಬಳಕೆ ಮಾಡಲಾಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಸಮೀಕ್ಷೆಯಲ್ಲಿ ದೀರ್ಘಕಾಲೀಕ ಆರೋಗ್ಯ ಸಮಸ್ಯೆಗಳಿಂದ ಬಳಲುವವರು ಕಂಡು ಬಂದಿದ್ದಾರೆ. ಯಾವೆಲ್ಲಾ ದೀರ್ಘಕಾಲೀಕ ರೋಗಗಳನ್ನು ಕೇಂದ್ರ ಸರ್ಕಾರ ತನ್ನ ಮಾನದಂಡದಲ್ಲಿ ಸೂಚಿಸುವುದೋ ತಿಳಿದಿಲ್ಲ. ಕೇಂದ್ರ ಸೂಚಿಸುವ ಎಲ್ಲಾ ನಿಯಮಾವಳಿಗಳನ್ನು ಅನುಸರಿಸಿಕೊಂಡು ಲಸಿಕೆ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಕೆಲವರಿಂದಾಗಿ, ಲಸಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಗಳು ಕಡಿಮೆಯಾಗುತ್ತಿವೆ. ಇದರಿಂದಾಗಿಯೇ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಬೇಕಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.