ಕಲ್ಬುರ್ಗಿ: ಅಖಂಡ ಕರ್ನಾಟಕಕ್ಕಾಗಿ ನಮ್ಮ ಪೂರ್ವಜರು ಸಾಕಷ್ಟು ಶ್ರಮಿಸಿದ್ದಾರೆ. ಆದ್ದರಿಂದ ಪ್ರತ್ಯೇಕ ರಾಜ್ಯ ಸ್ಥಾಪನೆಯ ಮೂಲಕ ರಾಜ್ಯವನ್ನು ಒಡೆಯುವ ಪ್ರಯತ್ನವನ್ನು ಯಾರೂ ನಡೆಸಬಾರದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಅಭಿವೃದ್ಧಿಯಾಗಬೇಕು ಎಂಬ ಕಾರಣದಿಂದ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಬದಲಾಗಿ ಪ್ರತ್ಯೇಕ ರಾಜ್ಯ ಸ್ಥಾಪಿಸುವ ನಿಟ್ಟಿನಿಂದಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲಿ ಎಂಬ ಉದ್ದೇಶ, ಆಶಯದ ಜೊತೆಗೆ ಸಂಪೂರ್ಣ ಕರ್ನಾಟಕದ ಅಭಿವೃದ್ಧಿಯತ್ತ ಪ್ರತಿಯೊಬ್ಬರೂ ಚಿತ್ತ ಹರಿಸೋಣ ಎಂದು ಅವರು ಹೇಳಿದರು.
ಅಭಿವೃದ್ಧಿಯಲ್ಲಿ ತಾರತಮ್ಯವಾದಾಗ ಅದನ್ನು ಪ್ರಶ್ನಿಸಿ ಸರಿಪಡಿಸಿಕೊಳ್ಳುವ ಕೆಲಸವನ್ನು ಮಾಡಬೇಕು. ಬದಲಾಗಿ ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಇಡುವುದು ಸರಿಯಲ್ಲ. ಐಐಟಿ ಬಂದಾಗ ಅದನ್ನು ಧಾರವಾಡದಲ್ಲಿ ಆರಂಭಿಸಿದ್ದೇವೆ. ಐಐಐಟಿ ಬಂದಾಗ ಅದನ್ನು ರಾಯಚೂರಿಗೆ ನೀಡುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.