ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೇ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ನಗರದ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಸಂಪೂರ್ಣ ಹವಾನಿಯಂತ್ರಿತವಾಗಲಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತಷ್ಟು ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸುವುದಕ್ಕೆ ಪೂರಕ ಕ್ರಮಗಳನ್ನು ಅನುಷ್ಠಾನ ಮಾಡಿದೆ.
ಈ ಸಂಬಂಧ ಕಾಮಗಾರಿಗಳು ಈಗಾಗಲೇ ಕೊನೆಯ ಹಂತಕ್ಕೆ ಬಂದು ತಲುಪಿವೆ. ಇನ್ನೇನು ಕೆಲವು ಸಮಯಗಳಲ್ಲೇ ಹವಾ ನಿಯಂತ್ರಣ ವ್ಯವಸ್ಥೆ ಕಾಮಗಾರಿಗಳು ಮುಗಿದು, ಸಾರ್ವಜನಿಕರ ಸೇವೆಗೆ ತೆರೆದುಕೊಳ್ಳಲಿದೆ. ಆ ಮೂಲಕ ದೇಶದ ಮೊದಲ ಹವಾ ನಿಯಂತ್ರಿತ ರೈಲು ನಿಲ್ದಾಣ ಎಂಬ ಖ್ಯಾತಿಗೂ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಭಾಜನವಾಗಲಿದೆ.
ಈ ಸಂಬಂಧ ಕೇಂದ್ರ ಸಚಿವ ಪೀಯುಷ್ ಗೋಯಲ್ ಅವರು ಟ್ವೀಟ್ ಮಾಡಿದ್ದು, ಕೊನೆಯ ಹಂತದ ಕಾಮಗಾರಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Have a glimpse of the upcoming Sir M. Visvesvaraya Terminal in Bengaluru, Karnataka, equipped with state-of-the-art facilities.
View on Koo: https://t.co/NrovriSqi0 pic.twitter.com/pRwu2zG38O
— Piyush Goyal (@PiyushGoyal) February 18, 2021
ಒಟ್ಟಿನಲ್ಲಿ ದೇಶದ ರೈಲು ಸೇವೆಯಲ್ಲಿ ಮಹತ್ವದ ಬದಲಾವಣೆ, ಅಭಿವೃದ್ಧಿಗಳನ್ನು ಮಾಡುವ ಮೂಲಕ ಕೇಂದ್ರ ಸರ್ಕಾರ, ರೈಲ್ವೆ ಸಚಿವಾಲಯ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.