ಬೆಂಗಳೂರು: ರಾಜ್ಯದಲ್ಲಿ ಮಾವು ಬೆಳೆಗಾರರು ಸಂಘಟಿತರಾಗಬೇಕಿದೆ. ಕಬ್ಬು ಬೆಳೆಗಾರರು ಇರುವಂತೆ ಮಾವು ಬೆಳೆಗಾರರಿಗೂ ಸಂಘ ನಿರ್ಮಾಣವಾಗಬೇಕಿದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಮಾವು ಬೆಳೆಗಾರರು ಮತ್ತು ರಫ್ತುದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳೆದ ಮಾವನ್ನು ಶೇಖರಿಸಿಡುವ, ಉತ್ಪನ್ನಗಳನ್ನು ಸಂಸ್ಕರಿಸಿಡುವ ಒಟ್ಟಾರೆಯಾಗಿ ಎಲ್ಲಾ ವ್ಯವಸ್ಥೆಗಳನ್ನೂ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಬೆಳೆಗಾರರ ಸಂಘ ಪ್ರಮುಖ ಪಾತ್ರ ವಹಿಸುತ್ತದೆ. ಕೋಲಾರ, ಚಿಕ್ಕಬಳ್ಳಾಪುರ ಮೊದಲಾದ ಪ್ರದೇಶಗಳಲ್ಲಿ ಮಾವು ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮಾವು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಂಗ್ರಹಿಸಿ, ಶೇಖರಿಸುವ ಮೂಲ ಸೌಕರ್ಯಗಳ ಅಭಿವೃದ್ಧಿಯ ಆಶಯದಿಂದ ಸಂಘಟಿತರಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಕೃಷಿಕರು ಹೆಚ್ಚು ಇಳುವರಿ ಪಡೆಯಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಹೆಚ್ಚೆಚ್ಚು ರಾಸಾಯನಿಕಗಳ ಬಳಕೆ ಮಾಡುವುದು ತಪ್ಪು. ಆರೋಗ್ಯದ ಬಗೆಗೂ ಗಮನ ನೀಡಿ ಸಾವಯವಗಳನ್ನೇ ಬಳಕೆ ಮಾಡಿಕೊಂಡು ಬೆಳೆ ಬೆಳೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರದ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.