ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸುಗಳ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಡಿಸೇಲ್ ಬೆಲೆ ಹೆಚ್ಚಾಗಿರುವುದರಿಂದ ಸರ್ಕಾರಿ ಬಸ್ಸುಗಳ ಪ್ರಯಾಣ ದರ ಹೆಚ್ಚಳವಾಗುವುದಿಲ್ಲ. ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವವರು ಬಡ ಮತ್ತು ಮಧ್ಯಮ ವರ್ಗದ ಜನರಾಗಿರುವುದರಿಂದ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ದರ ಹಿಂದಿನಂತೆಯೇ ಮುಂದುವರಿಯಲಿದೆ. ಕೊರೋನಾ ಸಂಕಷ್ಟದಿಂದ ಜನತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸದ್ಯಕ್ಕಂತೂ ಸರ್ಕಾರಿ ಬಸ್ಸುಗಳ ಪ್ರಯಾಣ ದರ ಹೆಚ್ಚಿಸುವ ಯಾವ ಉದ್ದೇಶವೂ ಸರ್ಕಾರಕ್ಕಿಲ್ಲ ಎಂದು ಅವರು ಹೇಳಿದ್ದಾರೆ.
ಕೊರೋನಾ ಕಾರಣದಿಂದ ರಾಜ್ಯದಲ್ಲಿ ಮೊದಲಿನಂತೆ ಬಸ್ಸುಗಳ ಸಂಚಾರ ಆರಂಭವಾಗಿಲ್ಲ, ಜೊತೆಗೆ ಜನರೂ ಬಸ್ಸುಗಳಲ್ಲಿ ಸಂಚರಿಸಲು ಹಿಂಜರಿಯುತ್ತಿದ್ದಾರೆ. ಆದರೆ ಮುಂದಿನ ಎಪ್ರಿಲ್ ಸಂದರ್ಭಕ್ಕಾಗುವಾಗ ಬಸ್ಸುಗಳಲ್ಲಿ ಜನ ಸಂಚಾರ ಮತ್ತೆ ಹೆಚ್ಚಾಗಬಹುದು ಎಂದು ಭರವಸೆ ವ್ಯಕ್ತಪಡಿಸಿದರು. ಕೋವಿಡ್- 19 ನಿಂದಾಗಿ ಸಾರಿಗೆ ಸಂಸ್ಥೆಯೂ ನಷ್ಟದಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ನೌಕರರ ವೇತನವನ್ನು ಸರ್ಕಾರವೇ ಭರಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.