ಬೆಂಗಳೂರು: ಕೊರೋನಾ ನಡುವೆ ಮಂಡನೆಯಾಗಲಿರುವ ರಾಜ್ಯ ಬಜೆಟ್ಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 8 ರಂದು ಬಹು ನಿರೀಕ್ಷೆಯ ಬಜೆಟ್ ಮಂಡನೆಯಾಗಲಿದೆ.
ಬಜೆಟ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ಕೆಲವು ದಿನಗಳಿಂದ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಂತ್ರಿಗಳು, ಶಾಸಕರ ಜೊತೆಗೆ ಬಜೆಟ್ ಪೂರ್ವ ಸಭೆಗಳನ್ನೂ ನಡೆಸುತ್ತಿದ್ದಾರೆ. ಮಾರ್ಚ್ 4 ರಿಂದ ತೊಡಗಿದಂತೆ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಮಾರ್ಚ್ ತಿಂಗಳ ಕೊನೆಯ ವರೆಗೂ ಈ ಅಧಿವೇಶನ ನಡೆಯಲಿದೆ. ಮಾರ್ಚ್ 4 ಮತ್ತು ಮಾರ್ಚ್ 5 ರಂದು ʼಒಂದು ದೇಶ, ಒಂದು ಚುನಾವಣೆʼ ಬಗ್ಗೆ ಚರ್ಚೆ ನಡೆಯಲಿದೆ. ಕೊರೋನಾ ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ಹಣಕಾಸಿನ ಇತಿಮಿತಿಯಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.