ಬೆಂಗಳೂರು: ದೇಶದ ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ್ಯಾಸ ಸ್ಥಾಪಿಸಲಾಗಿದೆ. ದೇಶಾದ್ಯಂತ ಪಾರದರ್ಶಕವಾಗಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಯಾವುದೇ ಬೇಧವಿಲ್ಲದೆ ದೇಶದ ಎಲ್ಲಾ ಜನರೂ ನಿಧಿ ಸಮರ್ಪಣೆ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಈ ಅಭಿಯಾನಕ್ಕೆ ಸಂಬಂಧಿಸಿದಂತೆ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ʼಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನʼ ನಡೆಸುತ್ತಿದ್ದಾರೆ. ಇವರಿಬ್ಬರೂ ವೋಟ್ ಬ್ಯಾಂಕ್ ಗಾಗಿ ದೇಶದ ಬಹುಸಂಖ್ಯಾರ ಬಹು ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸನ್ನು ಬಳಕೆ ಮಾಡುತ್ತಿದ್ದಾರೆ. ಇಂತಹ ನಡವಳಿಕೆಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಕಾರ್ಣಿಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಅವರು ಪ್ರಸ್ತುತ ಕೆಲವೇ ಜಿಲ್ಲೆಗಳಲ್ಲಿ ಪ್ರಸ್ತುತರಾಗಿದ್ದಾರೆ. ಅವರಿಗೆ ಅವರ ಇರುವಿಕೆಯನ್ನು ತೋರಿಸಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಇಂತಹ ಹೇಳಿಕೆಗಳನ್ನು ನೀಡುವುದಕ್ಕೆ ಹೆಚ್ಚು ಕುಪ್ರಸಿದ್ಧಿ ಪಡೆದಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತಿ ತಮ್ಮ ಬುಡ ಗಟ್ಟಿಮಾಡಿಕೊಳ್ಳುವ ವಿಕೃತಿ ಅವರದ್ದು. ತಮಗೆ ಪೂರಕವಾಗಿಲ್ಲದ ಯಾವುದೇ ವಿಚಾರವಾದರೂ ಅದನ್ನು ಅವರು ವಿರೋಧಿಸುತ್ತಾರೆ. ಸದ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸುವ ಮೂಲಕ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಸಮರ್ಪಿತವಾದ ನಿಧಿಯ ಲೆಕ್ಕವನ್ನು ಅದಕ್ಕೆ ಸಂಬಂಧಿಸಿದ ನ್ಯಾಸ ಸಮಾಜದ ಮುಂದಿಡಲಿದೆ. ಈ ಬಗ್ಗೆ ಯಾರಿಗೂ ಸಂದೇಹ ಬೇಡ. ಮಂದಿರ ನಿರ್ಮಾಣದ ಹೆಸರಿನಲ್ಲಿ ಯಾರಿಂದಲೂ ಬಲವಂತವಾಗಿ ನಿಧಿ ಸಂಗ್ರಹ ಮಾಡಲಾಗುವುದಿಲ್ಲ. ನ್ಯಾಸ ಇದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.