ಬೆಂಗಳೂರು: ಪಾರ್ಸಿ ಸಮುದಾಯದ ಜನರ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವರ ಜನಸಂಖ್ಯೆಯನ್ನು ಏರಿಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೂ ಯೋಜನೆಯನ್ನು ರೂಪಿಸುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ ತಕ್ಷಣದಲ್ಲೇ ರಾಜ್ಯ ಸರ್ಕಾರವೂ ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಿದೆ. ಈ ಅಂಶವನ್ನು ಕೇಂದ್ರ ಸರ್ಕಾರ ಬಜೆಟ್ ನಲ್ಲಿಯೂ ಪ್ರಸ್ತಾಪ ಮಾಡಿದೆ. ವಿವಿಧ ಕಾರಣಗಳಿಂಧಾಗಿ ದೇಶದಲ್ಲಿ ಪಾರ್ಸಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವೈಜ್ಞಾನಿಕವಾಗಿ ಆ ಸಮುದಾಯದ ಜನಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು ಸ್ವಉದ್ಯೋಗ, ಉದ್ದಿಮೆಗಳನ್ನು ಆರಂಭ ಮಾಡುವುದಕ್ಕೆ ಪೂರಕವಾಗಿ ಸಾಲ ಮತ್ತು ಸಬ್ಸಿಡಿ ವ್ಯವಸ್ಥೆಯನ್ನು ಅತ್ಯಂತ ಸರಳ ರೀತಿಯಲ್ಲಿ ನೀಡುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ 5 ರಿಂದ 20 ಲಕ್ಷದ ವರೆಗೆ ಸಾಲವನ್ನು ನೀಡಲಾಗುತ್ತದೆ. ಜೊತೆಗೆ ಉದ್ಯೋಗ ತರಬೇತಿ ನೀಡುವ ನಿಟ್ಟಿನಲ್ಲಿಯೂ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ರೂಪಿಸಿದೆ. ಶಿಕ್ಷಣಕ್ಕೂ ಸಮರ್ಪಕ ಅನುದಾನ ಒದಗಿಸಲಾಗುತ್ತದೆ ಎಂದು ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.