ನವದೆಹಲಿ: ಒಟ್ಟು 6 ಲಕ್ಷ 58 ಸಾವಿರ 674 ಫಲಾನುಭವಿಗಳಿಗೆ ನಿನ್ನೆ ಭಾರತದಲ್ಲಿ ಕೋವಿಡ್ ಲಸಿಕೆ ನೀಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದು ಅತ್ಯಧಿಕ ಏಕದಿನ ವ್ಯಾಕ್ಸಿನೇಷನ್ ಆಗಿದೆ.
ನಿನ್ನೆ ಸಂಜೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಮಂದೀಪ್ ಭಂಡಾರಿ ಅವರು, ಈವರೆಗೆ 1 ಕೋಟಿ 4 ಲಕ್ಷ 49 ಸಾವಿರ 942 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. 70 ಲಕ್ಷ 52 ಸಾವಿರ 845 ಆರೋಗ್ಯ ಕಾರ್ಯಕರ್ತರು ಮತ್ತು 33 ಲಕ್ಷ 97 ಸಾವಿರ 97 ಮುಂಚೂಣಿ ಕಾರ್ಮಿಕರಿಗೆ ಈವರೆಗೆ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರ ಮೊದಲ ಡೋಸ್ ವ್ಯಾಪ್ತಿಯು ಶೇಕಡಾ 75 ಕ್ಕಿಂತ ಹೆಚ್ಚು. 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರ ಮೊದಲ ಡೋಸ್ ವ್ಯಾಪ್ತಿಯು ಶೇಕಡಾ 50 ಕ್ಕಿಂತ ಕಡಿಮೆಯಿದೆ. 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇಕಡಾ 40 ರಷ್ಟು ಮುಂಚೂಣಿ ಕಾರ್ಮಿಕರಿಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.