ಚಿಕ್ಕಬಳ್ಳಾಪುರ: ಕೊರೋನಾ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ. ಈ ಸಂದರ್ಭದಲ್ಲಿ ಮೈಮರೆತರೆ ಅಪಾಯ ತಪ್ಪಿದಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾಗುತ್ತಿದೆ. ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿಯೂ ಕೊರೋನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಠಿಣ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿರುವುದಾಗಿ ಸಚಿರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮುಖ್ಯಮಂತ್ರಿಗಳು, ಗೃಹ ಸಚಿವರ ಜೊತೆಗೆ ಸಭೆ ನಡೆಸಲಾಗುತ್ತದೆ. ಆ ಬಳಿಕ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದವನ್ನು ನಡೆಸಲಾಗುತ್ತದೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನೂ ಹೊರಡಿಸಲಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯದೊಳಕ್ಕೆ ಬರುವವರಿಗೆ ಆರ್ಟಿಪಿಸಿಆರ್ ವರದಿ ಕಡ್ಡಾಯ ಎಂದು ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ. ಕೊರೋನಾ ಲಸಿಕೆ ಕಂಡುಹಿಡಿಯಲಾಗಿದೆ. ಆದರೂ ಕೊರೋನಾ ನಿಯಂತ್ರಣ ನಿಯಮಗಳ ಬಗ್ಗೆ ಯಾವುದೇ ನಿರ್ಲಕ್ಷ್ಯ ಮಾಡದೇ, ಕಡ್ಡಾಯವಾಗಿ ಅನುಸರಿಸವಂತೆ ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.