ಬೆಂಗಳೂರು: ರಾಜ್ಯದ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಸರ್ಕಾರವನ್ನು ಆಗ್ರಹಿಸುತ್ತಿದ್ದು, ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಲಾಗಿದೆ. ನಿಯಮಗಳ ಪ್ರಕಾರವೇ ಮೀಸಲಾತಿ ನೀಡುವ ನಿರ್ಧಾರಗಳನ್ನು ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಸಚಿವರಾದ ಮುರುಗೇಶ್ ನಿರಾಣಿ, ಸಿಸಿ ಪಾಟೀಲ್. ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ಬಸವರಾಜ್ ಬೊಮ್ಮಾಯಿ ಮಾದಲಾದವರ ಜೊತೆಗೆ ಮೀಸಲಾತಿ ಸಂಬಂಧ ಚರ್ಚೆ ನಡೆಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೆಲ ದಿನಗಳಿಂದ ಕೆಲವು ಸಮುದಾಯಗಳು ಮೀಸಲಾತಿಗಾಗಿ ರಾಜ್ಯ ಸರ್ಕಾರದ ಬಳಿ ಮನವಿ ಮಾಡುತ್ತಿವೆ. ಆಗ್ರಹ ಮಾಡುತ್ತಿವೆ. ಜೊತೆಗೆ ಈ ಸಮುದಾಯದ ಹಿನ್ನೆಲೆಯಿಂದ ಬಂದ ಸ್ವಾಮೀಜಿಗಳೂ ಮೀಸಲಾತಿ ಕುರಿತ ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ 26 ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಾಗುತ್ತಿರುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.