ನವದೆಹಲಿ: ಭಾರತ ಮತ್ತು ಇಥಿಯೋಪಿಯಾ ಇಂದು ವೀಸಾ ಸೌಲಭ್ಯ ಮತ್ತು ಚರ್ಮದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎರಡು ಒಪ್ಪಂದಗಳಿಗೆ ಸಹಿ ಹಾಕಿದವು.
ಇಥಿಯೋಪಿಯಾದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಡೆಮೆಕೆ ಮೆಕೊನ್ನೆನ್ ಹ್ಯಾಸೆನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಸಮ್ಮುಖದಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ಫೆಬ್ರವರಿ 16 ರಿಂದ ಹ್ಯಾಸೆನ್ 4 ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಎಸ್. ಜೈಶಂಕರ್ ಅವರು ಹ್ಯಾಸೆನ್ ಅವರೊಂದಿಗೆ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಉಪಯುಕ್ತ ಮತ್ತು ಫಲಪ್ರದ ಚರ್ಚೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಇಥಿಯೋಪಿಯಾ ನಡುವಣ ದ್ವಿಪಕ್ಷೀಯ ಕಾರ್ಯಸೂಚಿಯನ್ನು ಅದರಲ್ಲೂ ವಿಶೇಷವಾಗಿ ರಕ್ಷಣಾ, ಆರ್ಥಿಕ, ಎಸ್ & ಟಿ, ಡಿಜಿಟಲ್ ಮತ್ತು ಸಾಂಸ್ಕೃತಿಕ ಸಹಕಾರವನ್ನು ವಿಸ್ತರಿಸಲು ಇಬ್ಬರು ಸಚಿವರು ಒಪ್ಪಿಗೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.