ಶಿವಮೊಗ್ಗ: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಖೇಲೋ ಇಂಡಿಯಾ ಅಭಿಯಾನದಡಿ, ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಒಂದು ಒಳ್ಳೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ಬಂದಿರುವುದು ಹೆಮ್ಮೆ ಅನಿಸುತ್ತಿದೆ. 2028 ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಟಾಪ್ 10 ರಾಷ್ಟ್ರಗಳ ಪಟ್ಟಿಯಲ್ಲಿ ಗುರುತಿಸಿಕೊಳ್ಳಬೇಕು. ಭಾರತದಲ್ಲಿ ಯುವಜನರ ಸಂಖ್ಯೆ ಹೆಚ್ಚಿದ್ದು, ಅವರು ಒಲಿಂಪಿಕ್ಸ್ನಲ್ಲಿ ದೇಶವನ್ನು ಎತ್ತರಕ್ಕೇರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
ಕರ್ನಾಟಕದಲ್ಲಿ ಹೆಚ್ಚು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆಲವೇ ಸಮಯದಲ್ಲಿ ಶಿವಮೊಗು ಕ್ರೀಡಾ ಕೇಂದ್ರವಾಗಲಿದೆ. ಅದರಲ್ಲಿ ಯಾವ ಅನುಮಾನವೂ ಬೇಡ. ಶಿವಮೊಗ್ಗದ ಪರಿಸರವೂ ಕ್ರೀಡೆಗೆ ಪೂರಕವಾಗುವಂತೆಯೇ ಇದೆ ಎಂದು ಸಚಿವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.