ಮಂಗಳೂರು: ಇಂದಿನಿಂದ ಅನ್ವಯವಾಗುವಂತೆ ನೆರೆಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡಕ್ಕೆ ಆಗಮಿಸುವವರು ನಾಲ್ಕು ಮಾರ್ಗಗಳ ಮೂಲಕವಷ್ಟೇ ಪ್ರವೇಶ ಪಡೆಯಬಹುದು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೇರಳದ ಜೊತೆಗೆ ಗಡಿ ಹಂಚಿಕೆ ಮಾಡಿಕೊಂಡಿರುವ ಕರ್ನಾಟಕದ ಕರಾವಳಿ ಭಾಗಕ್ಕೂ ದಿನನಿತ್ಯ ನೂರಾರು ಮಂದಿ ಬರುವವರಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಫೆ. 22 ರಿಂದ ಅನ್ವಯವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ತಲಪಾಡಿ, ಸಾರಡ್ಕ, ಮೇನಾಲ, ಜಾಲ್ಸೂರು ಗಡಿಗಳು ಹೊರತುಪಡಿಸಿದರೆ ಉಳಿದೆಲ್ಲಾ ಮಾರ್ಗಗಳನ್ನು ಬಂದ್ ಮಾಡಲಾಗುತ್ತದೆ. ಜೊತೆಗೆ ಕೊರೋನಾ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯದೊಳಕ್ಕೆ ಪ್ರವೇಶಕ್ಕೆ ಅವಕಾಶ ಎಂದೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.