ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ರಾಮ ಮಂದಿರ ವಿಚಾರವನ್ನು ಮುಂದಿಟ್ಟುಕೊಂಡು ಮುಸ್ಲಿಮರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಬಗ್ಗೆ ಮುಸ್ಲಿಮರಿಗೆ ಚೆನ್ನಾಗಿ ತಿಳಿದಿದೆ. ನಿಮ್ಮನ್ನು ಅವರೆಂದೂ ನಂಬುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಣಿಗೆ ನೀಡುವುದು, ಬಿಡುವುದು ಅವರವರ ವೈಯಕ್ತಿಕ ವಿಚಾರ. ಕೆಲವರು ದೇಣಿಗೆ ನೀಡುವುದಿಲ್ಲ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಕೆಲವರು ತಮ್ಮೂರಲ್ಲೇ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಮಾತನಾಡುತ್ತಿದ್ದಾರೆ. ದೇಣಿಗೆ ನೀಡದಿರುವುದು ಅವರವರಿಷ್ಟ. ಆದರೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.