ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಕೊರೋನಾ ಸಂಬಂಧ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಪಂಜಾಬ್, ಮದ್ಯಪ್ರದೇಶ, ಛತ್ತೀಸ್ಗಢಗಳಲ್ಲೂ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಂಕು ವ್ಯಾಪಿಸದಂತೆ ಕಠಿಣ ಕ್ರಮ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೋನಾ ಪರೀಕ್ಷೆ ನಡೆಸುವುದಕ್ಕಾಗಿ 500 ತಂಡಗಳಿವೆ. ಇವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ತ್ವರಿತವಾಗಿ ಕೊರೋನಾ ಸೋಂಕು ಪತ್ತೆ ಮಾಡುವಂತೆ ಅವರು ಸೂಚಿಸಿದ್ದಾರೆ. ಪ್ರಾಥಮಿಕ ಹಂತದಲ್ಲಿಯೇ ಸೋಂಕಿತರನ್ನು ಪತ್ತೆ ಹಚ್ಚಿ ಅಗತ್ಯ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪಾಲಿಕೆಗೆ ನೀಡುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.