ಬೆಂಗಳೂರು: ಯೂನಿವರ್ಸಿಟಿ ಮಟ್ಟದ ಎರಡನೇಯ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜನೆ ಮಾಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲನೇಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕಳೆದ ಬಾರಿ ಭುವನೇಶ್ವರದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವರ್ಷದ ಕೊನೆಗೆ ಎರಡನೇಯ ಖೇಲೋ ಇಂಡಿಯಾ ಕ್ರೀಡಾಕೂಟ ಕರ್ನಾಟಕದ ಬೆಂಗಳೂರಿನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭಾರತೀಯ ವಿಶ್ವವಿದ್ಯಾನಿಲಯ ಸಂಘದ ಸಹಭಾಗಿತ್ವದಲ್ಲಿ ಈ ಕ್ರೀಡಾಕೂಟ ನಡೆಯಲಿರುವುದಾಗಿಯೂ ಅವರು ಹೇಳಿದ್ದಾರೆ.
25 ವರ್ಷಗಳೊಳಗಿನ 4 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಅವಕಾಶಗಳನ್ನೊಳಗೊಂಡು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಕ್ರೀಡಾಕೂಟದಲ್ಲಿ ಯೋಗಾಸನ ಮತ್ತು ಮಲ್ಲಕಂಬಗಳನ್ನು ಸೇರಿಸಲಾಗಿದೆ. ಈ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜಿಸಲು ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ಒದಗಿಸಿಕೊಡುವ ಭರವಸೆಯನ್ನೂ ಕಿರಣ್ ರಿಜಿಜು ನೀಡಿದ್ದಾರೆ.
ಇದಾದ ಬಳಿಕ ಕಿರಣ್ ರಿಜಿಜು ಅವರು ಫಿಟ್ ಬೆಂಗಳೂರು ಫಾರ್ ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
An exciting #FitBengaluruForFitIndia with the most enthusiastic Bengalureans. The "FIT India Triathlon" organised by @Tejasvi_Surya and his team saw massive participations by people from all walks of life!#FitIndiaMovement pic.twitter.com/G5VN6elXZ9
— Kiren Rijiju (@KirenRijiju) February 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.