ಬೆಂಗಳೂರು: ವಸತಿ ಸಮುಚ್ಚಯಗಳನ್ನೊಳಗೊಂಡಂತೆ ದೊಡ್ಡ ದೊಡ್ಡ ಕಟ್ಟಡಗಳು ವಾಹನಗಳ ಚಾರ್ಜಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಒಳಗೊಂಡಿರಬೇಕು. ಇದಕ್ಕೆ ಅಗತ್ಯವೆನಿಸಿದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ನಗರದಲ್ಲಿ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಆಯೋಜಿಸಲಾಗಿದ್ದ ʼಎಲೆಕ್ಟ್ರಿಕ್ ವಾಹನಗಳ ಬಳಕೆʼಯ ಬಗ್ಗೆ ನಡೆದ ʼಭವಿಷ್ಯದ ಸುಸ್ಥಿರ ಸಾರಿಗೆʼ ಎಂಬ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು, ಅವುಗಳ ಚಾರ್ಜಿಂಗ್ಗೂ ತಕ್ಕ ವ್ಯವಸ್ಥೆಯನ್ನು ಮಾಡಬೇಕು. ಎಲ್ಲ ಕಡೆಗಳಲ್ಲಿಯೂ ಸುಲಭವಾಗಿ ವಾಹನ ಚಾರ್ಜ್ ಮಾಡಿಕೊಳ್ಳುವುದಕ್ಕೆ ಪೂರಕ ವ್ಯವಸ್ಥೆಗಳಿರಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಬ್ಯಾಟರಿ ಚಾಲಿತ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರಲಿದೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದುಕೊಂಡು ಅದನ್ನು ಬಳಕೆ ಮಾಡಬಹುದಾಗಿದೆ. ಎಲ್ಲೆಡೆ ಬ್ಯಾಟರಿ ಬಂಕ್ಗಳ ಸ್ಥಾಪನೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕಡಿಮೆ ದರದಲ್ಲಿ ವಾಹನಗಳೂ ಲಭ್ಯವಾಗಲಿದೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಗ್ರಾಹಕ ಬ್ಯಾಟರಿ ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಸಬ್ಸಿಡಿ, ವಿದ್ಯುತ್ ರಿಯಾಯಿತಿ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.