ಬೆಂಗಳೂರು: ಎರಡನೇ ಹಂತದ ಕೊರೋನಾ ಲಸಿಕೆ ಅಭಿಯಾನದಲ್ಲಿ ಸುಮಾರು 1,13,830 ಫಲಾನುಭವಿಗಳಿಗೆ ಲಸಿಕೆ ನೀಡುವ ಮೂಲಕ ಕರ್ನಾಟಕ, ದೇಶದಲ್ಲೇ ಎರಡನೇ ಹಂತದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಫೆ. 21 ರ ವರೆಗೆ ಒಟ್ಟು 8,21,939 ಆರೋಗ್ಯ ಕಾರ್ಯಕರ್ತರು, 2,84,950 ಮುಂಚೂಣಿ ಕಾರ್ಯಕರ್ತರು ಕೊರೋನಾ ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಈ ವರೆಗೆ ಸುಮಾರು 4,24,491 ರಷ್ಟು ಜನರು ಮೊದಲ ಹಂತದಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. 2 ನೇ ಡೋಸ್ ಅನ್ನು 1,13,380 ಮಂದಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಸಕಾರಾತ್ಮಕ ಪ್ರತಿಕ್ರಿಯೆಗಳು ನಿಧಾನ ಗತಿಯಲ್ಲಿ ಬರತೊಡಗಿವೆ. 2 ನೇ ಡೋಸ್ ಲಸಿಕೆ ಹೆಚ್ಚು ಅಗತ್ಯ ಎಂಬುದನ್ನು ಸಾಕಷ್ಟು ಜನರು ಅರ್ಥ ಮಾಡಿಕೊಂಡಿದ್ದಾರೆ. ಇದರಿಂದ ಲಸಿಕಾ ಅಭಿಯಾನ ಯಶಸ್ವಿಯಾಗುತ್ತಿದೆ. 2 ನೇ ಡೋಸ್ ಲಸಿಕೆ ಪಡೆದವರಲ್ಲಿ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.