ಬೆಂಗಳೂರು: ಕರ್ನಾಟಕದಲ್ಲಿ ಯಾರಲ್ಲಿಯೂ ರೂಪಾಂತರಿ ಕೊರೋನಾ ಸೋಂಕು ಕಾಣಿಸಿಕೊಂಡಿಲ್ಲ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ. ವಿ. ರವಿ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಸೈಕಲ್ ಥ್ರೆಶ್ಹೋಲ್ಡ್ ಮೌಲ್ಯ 20 ಕ್ಕೂ ಕಡಿಮೆ ಇರುವ ಬೆಂಗಳೂರಿನ ನರ್ಸಿಂಗ್ ಕಾಲೇಜಿನ 14 ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿಯನ್ನು ಉನ್ನತ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ನವದೆಹಲಿಗೆ ಕಳುಹಿಸಲಾಗಿತ್ತು. ಇವರಾರಲ್ಲಿಯೂ ಬ್ರಿಟನ್, ಬ್ರೆಜಿಲ್ ಅಥವಾ ದಕ್ಷಿಣ ಆಫ್ರಿಕಾ ಮಾದರಿಯ ಸೋಂಕಿರುವುದು ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡದಲ್ಲಿ ಮತ್ತು ಇನ್ಯಾವುದೇ ಪ್ರದೇಶಗಳಲ್ಲಿ ಸೋಂಕು ತಗುಲಿರುವವರ ಆರ್ಟಿಪಿಸಿಆರ್ ಸೈಕಲ್ ಥ್ರೆಶ್ಹೋಲ್ಡ್ ಮೌಲ್ಯ 20 ಕ್ಕಿಂತ ಕಡಿಮೆ ಇಲ್ಲ. ಆದ್ದರಿಂದ ಹೆಚ್ಚಿನ ಪರೀಕ್ಷೆ ನಡೆಸುವ ಯಾವುದೇ ಅಗತ್ಯವಿಲ್ಲ. ಆದರೆ ಕೊರೋನಾ ಪರೀಕ್ಷೆ ನಡೆಸುವುದನ್ನು ಕಡಿಮೆ ಮಾಡದಂತೆ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆದರೆ ರಾಜ್ಯದಲ್ಲಿ ಕೊರೋನಾ ಹರಡುವ ಪ್ರಮಾಣ 1%ಕ್ಕಿಂತ ಕಡಿಮೆ ಇದ್ದು ಭಯ ಪಡಬೇಕಾದ ಯಾವುದೇ ಅಗತ್ಯ ಇಲ್ಲ ಎಂದು ರವಿ ಅವರು ಹೇಳಿದ್ದಾರೆ. ಆದರೆ ನೆರೆಯ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಿದರೆ ಕೊರೋನಾ ತೀವ್ರತೆ ತಪ್ಪಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.