ಬೆಂಗಳೂರು: ದೇಶದ ಎಲ್ಲಾ ಕ್ರೀಡಾ ಕೇಂದ್ರಗಳಲ್ಲಿ ತಾರಾ ಹೊಟೇಲ್ಗಳಂತಹ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿರುವುದಾಗಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ನಗರದ ಸಾಯಿ ಸ್ಪೋರ್ಟ್ಸ್ ಸೆಂಟರ್ನಲ್ಲಿ 300 ಹಾಸಿಗೆಗಳ ಕ್ರೀಡಾ ವಸತಿ ನಿಲಯ ಮತ್ತು ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸಾಯಿ ಸ್ಪೋರ್ಟ್ಸ್ ಸೆಂಟರ್ನಲ್ಲಿ ಯಾವ ಕೆಲಸಗಳು ನಡೆಯಬೇಕಿತ್ತೋ ಅವುಗಳನ್ನು ಸಂಪೂರ್ಣಗೊಳಿಸಲಾಗಿದೆ. ಕ್ರೀಡಾಪಟುಗಳಿಗೆ ಪೂರಕ ಅಗತ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ಕ್ರೀಡಾಪಟುಗಳು ದೇಶದ ಆಸ್ತಿ. ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಗುಣಮಟ್ಟದ ಮೂಲ ಸೌಕರ್ಯಗಳನ್ನು ಒದಗಿಸಲು ಪೂರಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಿಜಿಜು ಹೇಳಿದ್ದಾರೆ.
ಈ ಕೇಂದ್ರದಲ್ಲಿ ಕ್ರೀಡಾಪಟುಗಳಿಗೆ ಅಗತ್ಯವೆನಿಸಿದ ಆಹಾರವನ್ನು ಒದಗಿಸಿಕೊಡುವುದಕ್ಕೂ ಪೂರಕ ಕ್ರಮ ಕೈಗೊಳ್ಳಲಾಗುವುದು. ಈ ಕೇಂದ್ರದಲ್ಲ ಒಲಿಂಪಿಕ್ಗೆ ತೆರಳುವ ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೂರಕ ತರಬೇತಿಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉತ್ತಮ ತರಬೇತುದಾರರನ್ನು ಒದಗಿಸುವ ಕೆಲಸವನ್ನೂ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರತಿ ರಾಜ್ಯಗಳಲ್ಲಿಯೂ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. 20028 ರಲ್ಲಿ ಲಾಸ್ ಏಂಜಲಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಗೂ ನಾವು ಈಗಿನಿಂದಲೇ ಸಕಲ ಸಿದ್ಧತೆಗಳನ್ನು ನಡೆಸಬೇಕಾಗಿದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.