ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಮತ್ತೆ 56 ಸಾವಿರಕ್ಕೂ ಅಧಿಕ ಮನೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಕೇಂದ್ರ ಮಂಜೂರಾತಿ ಮತ್ತು ಮೇಲ್ವಿಚರಣಾ ಸಮಿತಿ ಈ ಮಂಜೂರಾತಿಯನ್ನು ನೀಡಿದೆ.
2022 ರ ವೇಳೆಗೆ 1.12 ಕೋಟಿ ಮನೆಗಳ ಒಟ್ಟು ಮೌಲ್ಯೀಕರಿಸಿದ ಬೇಡಿಕೆಯ ಪೈಕಿ ಸುಮಾರು 1.11 ಕೋಟಿ ಮನೆಗಳನ್ನು ಈಗ ಮಂಜೂರು ಮಾಡಲಾಗಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈಗ 73 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲಾಗಿದೆ. 42 ಲಕ್ಷ 70 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
ಎಲ್ಲರಿಗೂ ವಸತಿ ಎಂಬ ಧ್ಯೇಯದೊಂದಿಗೆ 2022 ರ ವೇಳೆಗೆ ನಗರ ಭಾರತದ ಎಲ್ಲ ಅರ್ಹ ಫಲಾನುಭವಿಗಳಿಗೆ ಪಕ್ಕಾ ಮನೆಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.