ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೇಳಿಕೆ ನೀಡಿದ್ದು, ಸರ್ಕಾರದ ದುರಾಡಳಿತದಿಂದಲೇ ಇಂತಹ ಸ್ಫೋಟಗಳು ನಡೆಯುತ್ತಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಕೆ ಸುಧಾಕರ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದರ ಪರಿಣಾಮವಾಗಿ, ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಅಕ್ರಮ ಗಣಿಗಾರಿಕೆ ಅಥವಾ ಇನ್ಯಾವುದೇ ರೀತಿಯ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ಎಂದಿಗೂ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ಕರ್ತವ್ಯವಾಗಿದ್ದು ಆದಷ್ಟು ಬೇಗ ಈ ಕೆಲಸ ಮಾಡಲಾಗುವುದು. ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ನಾಚಿಕೆಯಾಗಬೇಕು. ಈ ಘಟನೆಯ ಹಿಂದೆ ಯಾರೇ ಇರಲಿ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ.
ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ. (1/2)— Dr Sudhakar K (@DrSudhakar_) February 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.