ಬೆಂಗಳೂರು: ರಾಜ್ಯದ ಸುಮಾರು 15 ವರ್ಷಗಳ ಬೇಡಿಕೆಯಾದ ಗ್ರಂಥಾಲಯ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಿಸಿ, ಬರಹಗಾರರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸಚಿವ ಸುರೇಶ್ ಕುಮಾರ್ ಮುಂದಾಗಿದ್ದಾರೆ.
ಕೆಲ ಸಮಯದ ಹಿಂದೆ 15 ವರ್ಷದ ಬಾಲಕನೊಬ್ಬ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಳ ಮಾಡುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ. ಈ ಮನವಿಯನ್ನು ಪುರಸ್ಕರಿಸಿರುವ ಸಚಿವರು, ಪುಸ್ತಕ ಖರೀದಿಯ ಮಿತಿಯನ್ನು 1 ಲಕ್ಷ ರೂ. ಗಳಿಂದ 2.5 ಲಕ್ಷ ರೂ. ಗಳಿಗೆ ಏರಿಕೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಸಾರ್ವಜನಿಕ ಗ್ರಂಥಾಲಯಗಳ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್ ಹೊಸಮನಿ, ಸೀಮಿತ ಪುಸ್ತಕಗಳ ಪ್ರತಿಗಾಗಿ ಪ್ರಕಾಶಕರಿಗೆ ಈ ಹಿಂದೆ 1 ಲಕ್ಷ ರೂ. ಗಳನ್ನು ನೀಡಲಾಗುತ್ತಿತ್ತು. ಈ ಮೊತ್ತದಲ್ಲಿ 300 ಪ್ರತಿ ಪುಸ್ತಕಗಳನ್ನು ಮುದ್ರಿಸಲಾಗುತ್ತಿತ್ತು. ಇದೀಗ ಈ ಮಿತಿಯನ್ನು ಹೆಚ್ಚಿಸಲಾಗಿದೆ. ಸರ್ಕಾರದ ಈ ನಿರ್ಧಾರ ಸಾಹಿತಿಗಳಿಗೆ ಮತ್ತು ಪ್ರಕಾಶಕರಿಗೆ ಉತ್ತಮ ಬೆಲೆ ದೊರೆಯುವುದಕ್ಕೆ ಪೂರಕವಾಗಲಿದೆ. ಎಂದು ತಿಳಿಸಿದ್ದಾರೆ.
ಈ ಸಂಬಂಧ ಸಾಹಿತಿ ಫ್ರೊ. ದೊಡ್ಡರಂಗೇಗೌಡ ಮಾತನಾಡಿ, ಇದು ಬಹು ವರ್ಷದ ಬೇಡಿಕೆಯಾಗಿದೆ. ಈ ನಿರ್ಧಾರದಿಂದ ಪ್ರಕಾಶಕರು, ಬರಹಗಾರರಿಗೆ ಹೆಚ್ಚಿನ ಪ್ರೇರಣೆ ದೊರೆಯಲಿದೆ. ಸಚಿವ ಸುರೇಶ್ ಕುಮಾರ್ ಅವರು ಈ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವುದರಿಂದ ಪುಸ್ತಕ ಲೋಕದಲ್ಲಿ ಹೊಸ ದಿಸೆ ತೆರೆದುಕೊಳ್ಳಲು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.