ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಎಂಬಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಿಂದಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ಕೂಲಂಕುಶವಾಗಿ ತನಿಖೆ ಮಾಡುವ ನಿಟ್ಟಿನಲ್ಲಿ ಸಿಐಡಿಗೆ ವಹಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ ಅವರು ಸ್ಥಳ ಪರಿಶೀಲನೆಯನ್ನು ನಡೆಸಿದ್ದಾರೆ. ಸಿಐಡಿ ತನಿಖೆಗೆ ವಹಿಸಿರುವುದಾಗಿಯೂ ತಿಳಿಸಿದ್ದಾರೆ. ಸಿಐಡಿ ತನಿಖೆ ಮುಗಿಸಿ ವರದಿ ನೀಡಿದ ತಕ್ಷಣದಲ್ಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.