ನವದೆಹಲಿ: ಇಂದು ಪ್ರಧಾನಿ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎರಡು ವರ್ಷಗಳನ್ನು ಪೂರೈಸಿದೆ. ಈ ಯೋಜನೆಯನ್ನು 2019ರ ಫೆಬ್ರವರಿ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರಾರಂಭಿಸಿದರು.
ದೇಶಾದ್ಯಂತದ ಎಲ್ಲಾ ರೈತರ ಕುಟುಂಬಗಳಿಗೆ ಆದಾಯ ಬೆಂಬಲವನ್ನು ನೀಡುವ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಪಿಎಂ ಕಿಸಾನ್ ಅನ್ನು ಪ್ರಾರಂಭಿಸಲಾಯಿತು.
ಪಿಎಂ ಕಿಸಾನ್ ಯೋಜನೆಯಡಿ ವರ್ಷಕ್ಕೆ 6000 ರೂಪಾಯಿಗಳನ್ನು ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್ ವರೆಗೆ ಕೃಷಿ ಭೂಮಿಯನ್ನು ಹೊಂದಿದ ದೇಶದಾದ್ಯಂತದ ಎಲ್ಲಾ ಸಣ್ಣ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ನೀಡಿತು, ನಂತರ ದೇಶದ ಎಲ್ಲಾ ರೈತ ಕುಟುಂಬಗಳಿಗೆ ಅವರ ಭೂಮಿಯ ಗಾತ್ರವನ್ನು ಲೆಕ್ಕಿಸದೆ ಯೋಜನೆಯನ್ನು ವಿಸ್ತರಿಸಲಾಯಿತು.
ಶ್ರೀಮಂತ ರೈತರನ್ನು ಯೋಜನೆಯಿಂದ ಹೊರಗಿಡಲಾಗಿದೆ. ಈ ಯೋಜನೆ ಪ್ರಾರಂಭವಾದಾಗಿನಿಂದ 1 ಲಕ್ಷ 10 ಸಾವಿರ ಕೋಟಿ ರೂಪಾಯಿಗಳು ರೈತರ ಖಾತೆಯನ್ನು ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.